3 ದಿನಗಳಿಂದಲೂ ಒಂದೇ ತೆರನಾಗಿ ಬೀಳುವ ಮಳೆಯನ್ನೂ ಲೆಕ್ಕಿಸದೆ ಜಾನಕಿ ಕೊರಂಬು ತಲೆಗೇರಿಸಿ, ಮೊಣಗಂಟಿನವರೆಗೂ ಸೀರೆಯನ್ನು ಮೇಲಕ್ಕೆತ್ತಿ, ಲೋಟ ಹಿಡಿದ ಕೈಗಳನ್ನು ಚಳಿಗೆ ಎದೆಯ ಒಳಗಿರಿಸಿಕೊಂಡು ವೆಂಕಟ ಭಟ್ಟರ ಜಾರುವ ?? ಂಗಳಕ್ಕೆ ಕಾಲಿಟ್ಟಾಗ ಮುಸ್ಸಂಜೆಯ ಹೊತ್ತು ಹಲಸಿನ ಹಪ್ಪಳ ಮೆಲ್ಲುತ್ತಿದ್ದ ಭಟ್ಟರಿಗೆ ಆಶ್ಚರ್ಯವಾಯಿತು. ತಮ್ಮ ಪಕ್ಕದಲ್ಲಿಯೆ ಕುಳಿತು ಕರಿದ ತೆಳುವಾದ ಹಪ್ಪಳಗಳನ್ನು ಆರಿಸುತ್ತಿದ್ದ ಮಗನಿಗೆ ಹೇಳಿದರು.
"ಮಾಣಿ, ಹೋಗು ಆ ಕೆಳಗಿನ ಮನೆಯ ಹೆಂಗಸು ಬಂದಿದೆ. ಚಳಿಗೆ ನಡುಗುತ್ತಾ ನಿಂತಿದೆ. ?? ದಕ್ಕೆ ಕೇಳಿ ತೆಗೆದುಕೊಳ್ಳುವುದಕ್ಕೆ ಹೊತ್ತು ಗೊತ್ತು ಇಲ್ಲ. ಬಾಗಿಲು ತೆಗಿ" ಭಟ್ಟರ ಮಗ ರಮಣ ಆರಿಸಿದ ಹಪ್ಪಳವನ್ನು ಹಾಗೇ ಕೈಯಲ್ಲಿ ಹಿಡಿದುಕೊಂಡು ಮಳೆಗೆ ಗಚ್ಚನೆ ಮುಚ್ಚಿದ ಬಾಗಿಲಿನ ಚಿಲಕ ತೆಗೆದು ಎಳೆದ.
ಚಳಿಗೆ ನಡುಗುತ್ತಿದ್ದ ಹೆಂಗಸು, " ಮಾಣಿ, ?? ಮ್ಮ ಮನೆಯಲ್ಲಿ ಇಲ್ವಾ?" ?? ಂದಾಗ ರಮಣ, "ಇದ್ದಾರೆ" ?? ನ್ನುತ್ತಾ ಇಡೀ ಹಪ್ಪಳಕ್ಕೆ ಬಾಯಿ ಹಚ್ಚಿದ.
ಒಳಗೆ ಬಂದು ಗೋಡೆಗೆ ಒರೆಸಿಕೊಂಡಂತೆ ಕುಕ್ಕರುಗಾಲಿನಲ್ಲಿ ಕುಳಿತ ಹೆಂಗಸು, ಹಪ್ಪಳ ಕರಿದ ತೆಂಗಿನೆಣ್ಣೆಯ ಪರಿಮಳ ಮೂಗಿಗೆ ನಾಟುತ್ತಲೇ, ?? ಡುಗೆ ಮನೆಯತ್ತ ಮುಖ ಹೊರಳಿಸಿತು.
"ಏನು ಜಾನಕಮ್ಮ, ಈ ಹೊತ್ತಿನಲ್ಲಿ? ಮಳೆಗೆ ತಲೆ ಹೊರಗೆ ಹಾಕುವುದು ಬೇಡ ?? ನ್ನುವಷ್ಟು ಬೇಜಾರು. ಮೈ, ಕೈಯೆಲ್ಲಾ ಒದ್ದೆ ಮಾಡಿಕೊಂಡು ಬಂದಿದ್ದೀರಲ್ಲಾ, ಏನು ಕಥೆ?" ಹಪ್ಪಳದ ತಟ್ಟೆಯನ್ನು ಮಗನ ಕಡೆಗೆ ನೂಕಿ ಕುಳಿತಿದ್ದ ಹೆಂಗಸನ್ನು ಕೇಳಿದರು ಭಟ್ಟರು.
"ಭಟ್ರೆ, ಒಲೆ ಉರಿಸೋದೆ ಕಷ್ಟ ಆಗಿದೆ. ಒಟ್ಟು ಮಾಡಿಟ್ಟ ಕಟ್ಟಿಗೆಗೆ ಪಸೆ ಬಂದಿದೆ. ಗಂಜಿಯೇನೋ ಬೇಯಿಸಿ ಬಂದೆ. ಪದಾರ್ಥ ಮಾಡೋದಿಕ್ಕೆ ಸಾಧ್ಯವಿಲ್ಲ. ಸ್ವಲ್ಪ ಮಜ್ಜಿಗೆ ಇದ್ದಿದ್ರೆ ಚೆನ್ನಾಗಿರ್ತಿತ್ತು"
ಭಟ್ಟರಿಗೂ ಹೆಂಗಸಿನ ಮೇಲೆ ಕನಿಕರ ಬಂತು. ತಮ್ಮ ಮಡದಿ ವನಜಾಕ್ಷಿಯನ್ನು ಕರೆದರು."
"ಇಕಳ್ಳೇ... ?? ವರಿಗೆ ಮಜ್ಜಿಗೆ ಬೇಕಂತೆ, ಕೊಡು"
?? ಡುಗೆ ಮನೆಯಲ್ಲಿ ಎಣ್ಣೆಯ ಬಾಣಲೆಯನ್ನು ಒಲೆಯಿಂದ ಕೆಳಗಿರಿಸಿ, ತೂಗು ಬಲೆಯಿಂದ ಮಜ್ಜಿಗೆಯ ಪಾತ್ರೆ ತೆಗೆದು, ಲೋಟಕ್ಕೆ ಸುರುವಿ, ಒಂದು ಹಸಿ ಮೆಣಸಿನ ಕಾಯಿಯನ್ನು ?? ದಕ್ಕೆ ಹಾಕಿ ಹೊರಗೆ ಬಂದ ವನಜಾಕ್ಷಿ, ಜೊತೆಗೆ ಒಂದು ಕರಿದ ಹಪ್ಪಳವನ್ನು ಜಾನಕಿಯ ಕೈಯಲ್ಲಿಟ್ಟು ?? ವರ ಲೋಟಕ್ಕೆ ಮಜ್ಜಿಗೆಯನ್ನು ಸುರಿದರು. ಹಪ್ಪಳವನ್ನು ಮುರಿದ ಹೆಂಗಸು, "?? ಕ್ಕೋರೆ, ಏನಾದರೂ ವಿಶೇಷ ಉಂಟಾ?" ?? ಂದಾಗ ವನಜಾಕ್ಷಿಗೆ ನಗು ಬಂತು.
"ಮಳೆಗಾಲದಲ್ಲಿ ಏನು ವಿಶೇಷ ಜಾನಕಮ್ಮ?"
"?? ಲ್ಲ, ನಾನು ?? ದು ಕೇಳಿದಲ್ಲ"
"ಮತ್ತೆಂತ ವಿಶೇಷ? ಮದುವೆಯಾಗಿ ಹತ್ತು ವರ್ಷವಾಯಿತು. ಮಗನಿಗೆ ಎಂಟು ವರ್ಷವಾಯಿತು. ಇನ್ನೆಂತಹ ವಿಶೇಷ?" ನಕ್ಕು ನುಡಿದ ವನಜಾಕ್ಷಿ0ು ಮಾತಿನಲ್ಲಿ ನೋವಿನ ಎಳೆಯಿರುವುದನ್ನು ಗುರುತಿಸಿದ ಹೆಂಗಸು, "ಏನೇ ಹೇಳಿ... ನಾಲ್ಕೈದು ಹೆಣ್ಣು ಮಕ್ಕಳು ಓಡಾಡಿಕೊಂಡಿದ್ದ ಮನೆ ಇದು. ನಿಮಗೂ ಒಂದು ಹೆಣ್ಣು ಸಂತಾನ ಇದ್ದಿದ್ರೆ ಚೆನ್ನಾಗಿರ್ತಿತ್ತು" ?? ಂದಾಗ ?? ವರ ಮುಖ ಸಂಪೂರ್ಣ ಬಾಡಿದಂತಾಯಿತು.
ವೆಂಕಟ ಭಟ್ಟರಿಗೆ ಹೆಂಗಸಿನ ಮಾತು ಕೇಳಿ, " ಈ ಹೆಂಗಸಿನ ಬುದ್ಧಿಯೆ ಇಷ್ಟಾ?" ?? ಂದುಕೊಂಡರು.
ವನಜಾಕ್ಷಿಯ ನೋವಿಗೆ ಒಂದಷ್ಟು ತುಪ್ಪ ಸುರಿದು, ಕೊರಂಬು ಹಿಡಿದು ನಡು ಬಾಗಿಸುತ್ತಾ ?? ಂಗಳಕ್ಕೆ ಕಾಲಿಟ್ಟಿತು ಹೆಂಗಸು. ವನಜಾಕ್ಷಿ ಬಾಗಿಲು ಸರಿಸಿ, ಚಿಲಕ ಸೇರಿಸಿ ಹಿಂತಿರುಗಿದರು.
"?? ಲ್ವೇ, ಆ ಹೆಂಗಸಿಗೆಂತ ?? ಧಿಕ ಪ್ರಸಂಗ? ನಮ್ಮ ಮನೆಯ ವಿಚಾರಕ್ಕೆ ಮೂಗು ತೂರಿಸೋದಕ್ಕೆ ?? ದಕ್ಕೇನಿದೆ ಹಕ್ಕು?"
ವೆಂಕಟ ಭಟ್ಟರ ಮಾತು ವನಜಾಕ್ಷಿಗೆ ಸರಿ ಕಾಣಲಿಲ್ಲ.
"?? ವರು ಹೇಳಿದ್ರಲ್ಲಿ ತಪ್ಪೇನಿದೆ? ಈ ಮನೆಯಲ್ಲಿ ನಿಮ್ಮ ?? ಕ್ಕಂದಿರು, ತಂಗೀಂತ ನಾಲ್ಕೈದು ಜನ ಇರ್ಲಿಲ್ವಾ? ನಮಗೂ ಒಂದು ಹೆಣ್ಣು ಮಗು ಆಗ್ಲೀಂತ ಆಸೆಯಿಂದ ಹೇಳಿತು. ?? ದಕ್ಕೇನಂತೆ?"
"ನಿನಗೆ ಗೊತ್ತೇ ಇದೆ ಇವಳೆ... ನಮ್ಮ ಮನೆ ಹೆಣ್ಣು ಮಕ್ಕಳು ಯಾರು ಸುಖದಲ್ಲಿದ್ದಾರೆ ಹೇಳು? ಎಲ್ಲರೂ ಹೊಕ್ಕ ಮನೆಯಲ್ಲಿ ಕಷ್ಟ ಕಷ್ಟ ಕಷ್ಟವೆ. ಒಂದು ಸೀರೆ ಬೇಕಿದ್ರೂ ?? ವು ನಮ್ಮತ್ರ ಬಂದು ಸಂಕೋಚದಿಂದ ಕೇಳ್ತಾವೆ"
"?? ದಕ್ಕೆ ಏನಂತೆ? ನಾವು ಈಗ ನೆಮ್ಮದಿಯಿಂದ ಇಲ್ವಾ? ನಮಗೊಂದು ಹೆಣ್ಣು ಮಗುವಾದ್ರೆ ?? ದನ್ನು ಸಾಕುವಷ್ಟು ನಮ್ಮಲ್ಲಿ ಇಲ್ವಾ?"
"ನಮತ್ರ ಈಗ ಬೇಕಾದಷ್ಟು ಇದೆ. ಇಲ್ಲಾಂತ ನಾನು ಹೇಳೋದಿಲ್ಲ. ಆದರೆ ನಮ್ಮ ಸಂತಾನಕ್ಕೆ ಶಾಪ ಇದೇಂತ ನನ್ನ ?? ನಿಸಿಕೆ"
"ಏನು ಶಾಪರೀ? ಇದ್ದ ಬದ್ದ ಉಳುಮೆಯ ಗದ್ದೆಯನ್ನೆಲ್ಲಾ ನಿಮ್ಮಪ್ಪ ಒಕ್ಕಲಿಗನಿಗೆ ಮಾಡಿದ್ರು. ?? ವನು ಖುಷಿಯಲ್ಲಿಯೆ ಇದ್ದಾನೆ. ಒಂದು ಚೂರು ಯಾರ ಆಸ್ತಿಗೂ, ವಸ್ತುವಿಗೂ ?? ತ್ತೆ, ಮಾವ ಆಸೆ ಪಟ್ಟವರಲ್ಲ. ಇದ್ದಷ್ಟು ಕೈಯೆತ್ತಿ ಕೊಟ್ಟಿದ್ದಾರೆ. ಹಾಗಿರುವಾಗ ನಮಗೆ ಶಾಪ ಯಾರ್ದೂಂತ?"
"ನೋಡು, ನಿನಗೆ ?? ರ್ಥವಾಗ್ತದ ಇಲ್ವಾಂತ ನನಗೆ ಗೊತ್ತಿಲ್ಲ. ನನ್ನ ?? ಣ್ಣಂದಿರಿಗಾಗಲಿ, ತಮ್ಮನಿಗಾಗಲಿ ಹೆಣ್ಣು ಸಂತಾನ ಉಂಟಾ? ನನ್ನ ?? ಪ್ಪ, ?? ಮ್ಮನಿಗೆ ತಮ್ಮ ಹೆಣ್ಣು ಮಕ್ಕಳ ಕಣ್ಣೀರು ನೋಡಿ, ಮುಂದಿನ ಸಂತಾನಕ್ಕೆ ಹೆಣ್ಣು ಆಗೋದೇ ಬೇಡಾಂತ ?? ಂದುಕೊಂಡಿರಬಹುದಲ್ವಾ?"
"ಹಾಗೆ ನೋಡಿದ್ರೆ ನಿಮ್ಮ ?? ಕ್ಕಂದಿರಿಗೆ, ತಂಗಿಗೆ ಹೆಣ್ಣು ಸಂತಾನವಿಲ್ವಾ? ನೀವ್ಯಾಕೆ ಹಿರಿಯರ ಶಾಪವಿದೇಂತ ಹೇಳ್ತೀರಾ?"
"?? ವರು ಕೊಟ್ಟು ಹೋದವರು. ಗಂಡು ಮಕ್ಕಳಿಗೆ ಮಾತ್ರ ಹೆಣ್ಣು ಸಂತಾನ ಬೇಡಾಂತ ?? ವರ ಮನಸ್ಸಿನಲ್ಲಿದ್ದಿರಬಹುದು"
ಗಂಡನ ಮಾತು ವನಜಾಕ್ಷಿಗೆ ಹಿಡಿಸಲಿಲ್ಲ. ತಮ್ಮ ಸ್ವಂತ ಮಕ್ಕಳಿಗೆ ಯಾರಾದರೂ ಶಾಪ ಕೊಡುತ್ತಾರೆಯೆ? ?? ನ್ನುವುದು ?? ವಳಿಗೆ ರುಚಿಸದ ಮಾತಾಗಿತ್ತು.
ವೆಂಕಟ ಭಟ್ಟರಿಗೆ ಮಾತ್ರ ತಲೆಯಲ್ಲಿ ?? ದು ?? ಡರಿ ಹೋಗಿತ್ತು. ಹೆಂಡತಿಯ ಹಾಗೆ ಆತನಿಗೂ ಹೆಣ್ಣು ಮಗು ಬೇಕೆನ್ನುವ ಆಸೆಯಿದ್ದರೂ ಮನಸ್ಸಿನಲ್ಲಿ ?? ದೇ ವಿಷಯ ಗಟ್ಟಿಯಾಗಿ ಕುಳಿತಿತ್ತು. ಇಲ್ಲವಾದರೆ ಮಡದಿ, ರಮಣ ಹುಟ್ಟಿದ ನಂತರ 3 ಬಾರಿ ಗರ್ಭಿಣಿಯಾದರೂ, ಎರಡು ಸಲ ಗಂಡು ಮಗು ಬೇಡವೆಂದು ಗರ್ಭ ತೆಗೆಸಿದ್ದಾಯಿತು. ಮೂರನೆ ಬಾರಿ ಗರ್ಭ ಹೋದಾಗ ?? ದೆಷ್ಟು ಬೇಸರವಾಗಿತ್ತು. ನಂತರ ಗರ್ಭ ನಿಂತೇ ಇಲ್ಲವೇಕೆ?
"ನೀನು ಏನೆ ಹೇಳು ಆ ಹೆಂಗಸು ಸರಿಯಿಲ್ಲ. ನಮ್ಮ ಮನೆಯ ವಿಷಯಗಳನ್ನೆಲ್ಲಾ ಇನ್ನೊಂದು ಮನೆಗೆ ಹೇಳಿ ಹಿಂದಿನಿಂದ ನಗಾಡುತ್ತೆ ?? ಷ್ಟೆ. ಇಲ್ಲಾಂದ್ರೆ ಎದುರು ಮನೆಯ ಶಾಂತಕ್ಕ ನಮ್ಮ ಜೊತೆಗೆ ಜಗಳ ಕಾಯೋಕಿತ್ತಾ? ಮೂರು ಹೊತ್ತು ಗದ್ದೆ ಕೆಲಸ ಮಾಡಿಕೊಂಡು ನಾವು ಕೊಡ್ತಿದ್ದ ಊಟ ತಿಂದುಕೊಂಡು ಒಳ್ಳೆಯ ರೀತಿಯಲ್ಲಿ ಇರಲಿಲ್ವಾ?"
"?? ದಕ್ಕೆಂತ ಮಾಡೋದು? ?? ವರ ಮಗ ಬೊಂಬಾಯಿಯಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದಾನೆ. ತಾಯಿಯನ್ನು ಕೆಲಸಕ್ಕೆ ಹೋಗುವುದು ಬೇಡ ?? ಂದಿದ್ದಾನೆ. ?? ವರು ಕೆಲಸ ನಿಲ್ಲಿಸಿದ್ದಾರೆ. ಆ ಹೆಂಗಸು ಬರ್ಲಿಲ್ಲಾಂತ ನಮ್ಮ ಮನೆ ಕೆಲಸ ನಿಂತಿದಾ? ನಾವು ಮಾಡಿಕೊಂಡು ಹೋಗ್ತಾ ಇಲ್ವಾ?"
"ನೀನು ಗದ್ದೆಗೆ ಇಳಿಯುವ ಹಾಗಾಗಿದ್ದು ?? ದೇ ಹೆಂಗಸಿನಿಂದ ?? ಲ್ವಾ? ಈ ಜಾನಕಮ್ಮ ಆ ಹೆಂಗಸಿಗೆ ಏನೋ ಕಿವಿಯೂದಿದೆ. ?? ದಕ್ಕೆ ಆ ಹೆಂಗಸು ಇದ್ದಕ್ಕಿದ್ದಂತೆ ಜಗಳ ಮಾಡ್ಕೊಂಡು ಕೆಲಸ ಬಿಡ್ತು ನೋಡು"
"ನಾನು ನಿಮಗೆ ಹೇಳ್ತಾ ಇಲ್ವಾ... ಈ ಜಾಗ ಮಾರಿ ಎಲ್ಲಾದ್ರೂ ಪಟ್ಟಣದ ಕಡೆಗೆ ಹೋಗೋಣಾಂತ. ನೀವು ಕೇಳ್ತಾ ಇಲ್ಲ. ನಮ್ಮ ಮಣ್ಣಿನ ಋಣ ಇಲ್ಲೆ ಇದೆ. ಇದ್ದದನ್ನು ನಾವೆ ಮಾಡ್ಕೊಂಡು ಹೋಗುವುದು ಚೆಂದ ?? ಲ್ವಾ?"
"ಈ ಜಾಗನ ಬಿಟ್ಟು ಹೋಗುವುದು ಕಷ್ಟಾಂತ ನಿನಗೆ ಗೊತ್ತಿಲ್ವಾ? ನನ್ನ ?? ಪ್ಪಯ್ಯ ಎಷ್ಟು ಕಷ್ಟ ಪಟ್ಟು ಈ ಜಾಗಾನ ತೆಗೆದುಕೊಂಡಿದ್ದಾರೇಂತ ನಿನಗೆ ಗೊತ್ತಿಲ್ವಾ? ?? ಂತದ್ರಲ್ಲಿ ಮಾರುವ ಮಾತುಂಟಾ ?? ಥವಾ ನಾವು ?? ದನ್ನು ಯೋಚಿಸುವುದೂ ತಪ್ಪಲ್ವಾ?"
ಮಾತು ಮುಂದುವರಿಸಲು ಇಚ್ಛಿಸದೆ ವನಜಾಕ್ಷಿ ತಟ್ಟೆ, ಲೋಟಗಳನ್ನು ಎತ್ತಿಕೊಂಡು ?? ಡುಗೆ ಕೋಣೆಯೊಳಗೆ ನಡೆದರು.
***
ಎಪ್ಪತ್ತರ ದಶಕದಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿಯಾದಾಗ ಶ್ರೀನಿವಾಸರಿಗೆ ತಾವು ಮಧುರೈ0ುಲ್ಲಿ ನಡೆಸುತ್ತಿದ್ದ ಹೊಟೇಲು ಹೆಚ್ಚು ಸಮಯ ಮುಂದುವರಿಯಲಾರದೆನಿಸಿತು. ತಮ್ಮನ್ನೇ ನಂಬಿರುವ ತಮ್ಮಂದಿರಾದ ಗಿರೀಶ ಮತ್ತು ಜಗನ್ನಾಥರನ್ನು ಕರೆದು ತಮ್ಮ ಸಮಸ್ಯೆಯನ್ನು ಮುಂದಿಟ್ಟರು.
"ಇನ್ನು ಈ ಪುಢಾರಿಗಳ ಉಪಟಳದಿಂದ ಹೊಟೇಲು ಮುಂದುವರಿಸಿಕೊಂಡು ಹೋಗುವುದು ತುಂಬಾ ಕಷ್ಟ. ?? ವರುಗಳು ದಿನಕ್ಕೊಂದು ತಗಾದೆ ತೆಗೆದು, ಹಫ್ತಾ ವಸೂಲಿಗೂ ಮುಂದಾಗುತ್ತಿದ್ದಾರೆ. ನಾವು ಮರ್ಯಾದೆಯಿಂದ ಬಾಳುವುದು ಕಷ್ಟವೇ. ಇನ್ನು ಮುಂದೆ ಏನು ಮಾಡುವುದು? ನೀವೂ ಯೋಚಿಸಿ... ಒಂದು ನಿರ್ಧಾರಕ್ಕೆ ಬರೋಣ"
ಶ್ರೀನಿವಾಸರ ಹಾಗೇ ಗಿರೀಶ ಹಾಗೂ ಜಗನ್ನಾಥರಿಗೂ ಎಂಟು ಹತ್ತು ಮಕ್ಕಳು. ಇದ್ದಕ್ಕಿದಂತೆ ಹೊಟೇಲು ಮುಚ್ಚಿ, ಸಂಸಾರವನ್ನು ನಡು ಬೀದಿಯಲ್ಲಿ ನಿಲ್ಲಿಸುವ ಪರಿಸ್ಥಿತಿ ಎದುರಾದರೆ? ಎಂಬ ಆತಂಕ ತಮ್ಮಂದಿರಿಬ್ಬರಲ್ಲು ಮೂಡಿತು. ?? ವರೊಂದು ನಿರ್ಧಾರಕ್ಕೆ ಬಂದು, "?? ಣ್ಣಾ, ಕಷ್ಟನೋ ಸುಖನೋ ನಮ್ಮ ಜೀವನ ಇಲ್ಲೇ ಸಾಗಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ" ಎಂದು ತಮ್ಮ ?? ಸಹಾಯಕತೆಯನ್ನು ತೋಡಿಕೊಂಡಾಗ, ಶ್ರೀನಿವಾಸರಿಗೆ ನಿಜವಾಗಿಯೂ ಇರುಸು ಮುರಿಸಿನ ಪರಿಸ್ಥಿತಿಯಾಯಿತು. ಎಲ್ಲಾ ಜವಾಬ್ದಾರಿಯನ್ನು ತಾವೇ ಹೊತ್ತು ಕೊಂಡು ಹೇಗೋ ಹೊಟೇಲನ್ನು ನಡೆಸಿಕೊಂಡು ಹೋಗಿದ್ದರು. ?? ವರಿಗಂತೂ ಮುಂದುವರಿಸುವ ಯೋಚನೆಯಿಲ್ಲ. ತಮ್ಮಂದಿರಿಬ್ಬರಿಗೆ ಜವಾಬ್ದಾರಿಯನ್ನು ಬಿಟ್ಟು ಹೊಗುವ ನಿರ್ಧಾರ ಕೈಗೊಂಡರು.
"ನಾನು ನಿರ್ಧಾರ ತೆಗೆದುಕೊಂಡಾಯಿತು. ಇನ್ನು ಕಷ್ಟನೋ ಸುಖನೋ ನಾನು ಊರಿಗೆ ಹೋಗಿ ಸೆಟಲ್ ಆಗಿ ಬಿಡ್ತೀನಿ. ಹೊಟೇಲನ್ನು ನೀವು ನಿಭಾಯಿಸಿಕೊಂಡು ಹೋಗ್ತೀರೀಂತ ನನಗೆ ಧೈರ್ಯ ಇದೆ"
ಶ್ರೀನಿವಾಸನ ಮಾತುಗಳನ್ನು ಕೇಳಿ ತಮ್ಮಂದಿರೇನು ಹೌಹಾರಲಿಲ್ಲ. ಸಂತೋಷದಿಂದ ಒಪ್ಪಿಕೊಂಡರು.
"ನನ್ನ ಪಾಲಿನ ಹಣವನ್ನು ನಾನು ಹಿಂತೆಗೆ0ುಬಹುದಲ್ಲಾ?" ಶ್ರೀನಿವಾಸರು ಸಂಕೋಚದಿಂದ ಕೇಳುವಾಗ ತಮ್ಮಂದಿರು ಒಬ್ಬರ ಮುಖ ಒಬ್ಬರು ನೋಡಿಕೊಂಡರು.
"ಎಲ್ಲ ಹಣ ನೀನು ತೆಗೆದುಕೊಂಡು ಹೋದರೆ ನಮಗೆ ನಿಭಾಯಿಸಲು ಕಷ್ಟವಾಗುತ್ತದೆ. ಹೇಗೂ ನೀನು ಇಲ್ಲಿಗೆ ನಮ್ಮನ್ನು ನೋಡೋದಿಕ್ಕೆ ಬರುತ್ತಿಯಲ್ಲಾ. ಆಗ ಸ್ವಲ್ಪ ಸ್ವಲ್ಪವೇ ಹಣ ಹೊಂದಿಸಿ ಕೊಡುತ್ತೇವೆ" ಎಂದು ಹೇಳುವಾಗ ಒಪ್ಪಿಕೊಳ್ಳವುದು ಬಿಟ್ಟರೆ ಬೇರೆ ದಾರಿಯೇ ಇರಲಿಲ್ಲ.
?? ಂತೂ ನಾಲ್ಕು ಗಂಡು, ನಾಲ್ಕು ಹೆಣ್ಣು ಮಕ್ಕಳ ಜೊತೆಗೆ ಕೈ ಹಿಡಿದವಳನ್ನು ಕರೆದುಕೊಂಡು ಮೂರು ದಿನ ರೈಲಿನ ಪ್ರಯಾಣ ಜೊತೆಗೆ ಒಂದು ದಿನ ಬಸ್ಸಿನಲ್ಲಿ ಪ್ರಯಾಣ ಮುಗಿಸಿ, ಊರಿಗೆ ಬರುವಾಗ ?? ಣ್ಣ ?? ನಂತರಾಮ ಬಹಳ ಸಂತೋಷದಿಂದಲೇ ಸ್ವಾಗತಿಸಿದ್ದ. ?? ನಂತರಾಮನಿಗೂ ಹತ್ತು ಜನ ಮಕ್ಕಳು. ಜೊತೆಗೆ ಶ್ರೀನಿವಾಸನ ಎಂಟು ಮಕ್ಕಳು ಮನೆಯಲ್ಲಿ ನಿತ್ಯ ಗಲಾಟೆಯೆ. ಶ್ರೀನಿವಾಸನ ಮಕ್ಕಳಿಗೆ ಕನ್ನಡ, ತುಳು ಭಾಷೆ ?? ಷ್ಟಾಗಿ ಬರುತ್ತಿರಲಿಲ್ಲವಾದುದರಿಂದ ?? ವುಗಳು ತಮಿಳಿನಲ್ಲಿಯೆ ಏನೇನೋ ?? ಂದುಕೊಂಡು ಸುಮ್ಮನಾಗುತ್ತಿದ್ದವು.
ಒಂದು ದಿನ ರಾತ್ರಿ ಒಂದು ಸಣ್ಣ ವಿಷಯದ ಕಿಡಿ ದೊಡ್ಡ ಜ್ವಾಲೆಯಾಗಿ ಹೋಯಿತು. ಶ್ರೀನಿವಾಸನ ದೊಡ್ಡ ಮಗ ತನ್ನ ದೊಡ್ಡಪ್ಪ ?? ನಂತರಾಮನ ಎದುರಿಗೆ ಕುರ್ಚಿಯ ಮೇಲೆ, `ಕಾಲಿನ ಮೇಲೆ ಕಾಲು ಹಾಕಿ ಕುಳಿತ' ?? ನ್ನುವುದು ?? ನಂತರಾಮನಿಗೆ ಆ ಹುಡುಗ `ಮರ್ಯಾದೆ' ಕೊಡಲಿಲ್ಲ ?? ನ್ನುವ ಮಟ್ಟಿಗೆ ಬಂದು ನಿಂತಿತು. ರಾತ್ರಿ ?? ಂಗಡಿ ಮುಗಿಸಿ ಬಂದ ಶ್ರೀನಿವಾಸನನ್ನು ಊಟ ಮಾಡಲು ಬಿಡದೆ ಜಗಳ ಕಾಯ್ದರು ?? ನಂತರಾಮ.
"ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಯಾವುದನ್ನೂ ಹೇಳಿಕೊಡಲಿಲ್ಲ. ದೊಡ್ಡವರು ?? ನ್ನುವ ಗೌರವವೇ ನಿನ್ನ ಮಕ್ಕಳಿಗೆ ಇಲ್ಲ"
ಶ್ರೀನಿವಾಸನಿಗೆ ಹಸಿದ ಹೊಟ್ಟೆ ಒಂದು ಕಡೆಯಾದರೆ, ಇನ್ನೊಂದು ಕಡೆ ?? ಣ್ಣ ಹೇಳಿದ ಮಾತುಗಳು, ತನ್ನ ಹಿರಿಯ ಮಗನ ಮೇಲೆ ಕೋಪ ಉಕ್ಕಿ ಬರುವಂತೆ ಮಾಡಿತು. ಮಗನನ್ನು ಕರೆದು ಕೆನ್ನೆಗೆ ನಾಲಕ್ಕು ಬಾರಿಸಿ, ?? ಗ್ರಜನ ಕಾಲು ಹಿಡಿಸಿದ.
ಶ್ರೀನಿವಾಸನ ಹೆಂಡತಿ ನಳಿನಾಕ್ಷಿಗೆ ಈ ರೀತಿ ತನ್ನ ಹಿರಿಯ ಮಗ ಸುಮ್ಮನೆ ಪೆಟ್ಟು ತಿಂದದ್ದು ?? ವಳ ಕಣ್ಣುಗಳಲ್ಲಿ ನೀರು ತರಿಸಿತು.
ರಾತ್ರಿ ಗಂಡ ಹತ್ತಿರ ಬಂದಾಗ, "ರೀ, ಎಷ್ಟು ದಿನಾಂತ ಈ ಮನೆಯಲ್ಲಿ ಜೀವ ತೇಯೋದು? ನಮ್ಮ ಮಕ್ಕಳಿಗಂತೂ ಉಸಿರು ಕಟ್ಟೋ ಹಾಗಾಗಿದೆ. ಕೂತರೆ ತಪ್ಪು, ನಿಂತರೆ ತಪ್ಪು. ನಿಮ್ಮ ?? ಣ್ಣನ ಮಕ್ಕಳು ಉಂಡಾಡಿ ಗುಂಡರ ತರಹ ?? ಲೆದಾಡಿಕೊಂಡು ಬರ್ತಾರೆ. ನಮ್ಮ ಮಕ್ಕಳು ?? ಡುಗೆ ಕೆಲಸದಿಂದ ಹಿಡಿದು ಗದ್ದೆ ಕೆಲಸ ಮಾಡುವವರೆಗೂ ಸಹಾಯ ಮಾಡ್ಬೇಕು. ನಮ್ಮ ಮಕ್ಕಳು ಬೆಳೆದಿರುವುದೆಲ್ಲಾ ಪಟ್ಟಣದಲ್ಲಿ. ಈ ಹಳ್ಳಿಯ ರೀತಿ, ರೀವಾಜು ?? ವುಗಳಿಗೆಲ್ಲಾ ಹೇಗೆ ಗೊತ್ತಾಬೇಕು, ಹೇಳಿ? ಇವತ್ತು ಇಷ್ಟು ಸಣ್ಣ ವಿಷಯಕ್ಕೆ ಹೇಗೆ ಹಾರಾಡಿದ್ರು ನೋಡಿದ್ರಾ?" ?? ಂದಾಗ
ಹೆಂಡತಿಯ ಮಾತಿಗೆ ತೆಪ್ಪಗೆ ಮುಸುಕೆಳೆದು ಮಲಗಿದ ಶ್ರೀನಿವಾಸನಿಗೆ ಮುಸುಕಿನ ಒಳಗಿಂದಲೇ ಚಿಂತೆ ಕಾಡಿತು. ಇದೇ ರೀತಿ ಮುಂದುವರಿದರೆ, ಒಂದಲ್ಲ ಒಂದು ದಿನ ?? ಗ್ರಜ `ಮನೆ ಬಿಟ್ಟು ಹೋಗು' ?? ಂದರೆ ಇಷ್ಟು ದೊಡ್ಡ ಸಂಸಾರವನ್ನು ಹಿಡಿದುಕೊಂಡು ಹೋಗುವುದು ಎಲ್ಲಿಗೆ?
ಕೊನೆಗೆ ಹೊರಳಾಡಿ ಹೊರಳಾಡಿ ಒಂದು ನಿರ್ಧಾರಕ್ಕೆ ಬಂದ. ಹೇಗೂ ತನ್ನ ಪಾಲಿನ ಹಣ ತಮ್ಮಂದಿರಿಂದ ಬರುವುದಿದೆ. ಮಧುರೈಗೆ ಹೋಗಿ ಆ ಹಣ ಹಿಡಿದುಕೊಂಡು ಬಂದು ಊರಿನಲ್ಲಿಯೆ ಸ್ವಲ್ಪ ಆಸ್ತಿಯನ್ನು ತೆಗೆದುಕೊಂಡು ಸಣ್ಣ ಮನೆ ಕಟ್ಟಿಕೊಂಡು ಸಂಸಾರ ಹೂಡುವುದು. ನಳಿನಾಕ್ಷಿಗೆ ತನ್ನ ನಿರ್ಧಾರವನ್ನು ತಿಳಿಸಿದ. ಆಕೆಗೆ ಸುತಾರಾಂ ಇಷ್ಟವಿಲ್ಲ.
"ನಮ್ಮ ಮಕ್ಕಳು ಸಿಟಿಯಲ್ಲಿ ಬೆಳೆದವರು. ಪಟ್ಟಣದಲ್ಲಿಯೆ ಒಂದು ಸಣ್ಣ ಮನೆಯನ್ನು ನೋಡಿ. ನೀವೂ ?? ಲ್ಲಿ ಸಣ್ಣ ಮಟ್ಟದಲ್ಲಿ ಹೊಟೇಲೋ, ?? ಂಗಡಿಯೋ ಇಟ್ಟುಕೊಂಡರೆ ಮನೆ ಖರ್ಚು ನಡೆಯುತ್ತದಲ್ಲಾ?"
"ಪಟ್ಟಣದ ಬದುಕು ?? ಷ್ಟು ಸುಲಭ ?? ಲ್ಲ. ಪಟ್ಟಣ ಬೆಳೆದ ಹಾಗೇ ನಮ್ಮ ಆದಾಯನೂ ಬೆಳೆಯುವ ಹಾಗಿದ್ದರೆ ಸರಿ, ಇಲ್ಲದಿದ್ದರೆ ಈ ಮಕ್ಕಳನ್ನು ಕಟ್ಟಿಕೊಂಡು ಸಂಸಾರ ನಡೆಸುವುದು ಹೇಗೆ? ಮೊದಲು ?? ಣ್ಣನ ಬಳಿ ಮಾತನಾಡುತ್ತೇನೆ. ?? ವನು ಏನು ಹೇಳುತ್ತಾನೋ ಹಾಗೆ ಮಾಡೋಣ" ?? ಂದಾಗ ನಳಿನಾಕ್ಷಿಗೆ ಮಾತನಾಡುವಂತೆ ಇರಲಿಲ್ಲ. ?? ಣ್ಣನ ಮಾತೇ ವೇದವಾಕ್ಯ ಎಂದು ತಿಳಿದ ಶ್ರೀನಿವಾಸನಿಗೆ ?? ಣ್ಣನಿಂದಲೇ ಮಾತು ಬಂದಾಗ ?? ಧೀರನಾದ.
"ಶ್ರೀನಿವಾಸ, ನಮ್ಮ ಸಂಸಾರಗಳು ದೊಡ್ಡ ಸಂಸಾರಗಳು. ಹಿರಿಯರ ಮನೇಂತ ಇಷ್ಟು ದಿನ ನಿನ್ನನ್ನು ಇಲ್ಲಿ ಇರೂಂತ ಹೇಳಿದೆ. ನನಗೂ ಬೇಸಾಯದಿಂದ ಏನೂ ಸಿಗ್ತಾ ಇಲ್ಲ. ನೀನು ಖರ್ಚಿಗೆ ಕೊಡುವುದು ಕೂಡ ಏನೂ ಸಾಲುವುದಿಲ್ಲ. ಹಿರಿಯರ ಆಸ್ತಿ ಬೇಡಾಂತ ಹೇಳಿ ನೀವುಗಳು ನನ್ನ ಹೆಸರಿಗೆ ಬರೆದು ಕೊಟ್ಟಿದ್ದೀರಿ. ಆದರಿಂದ ನೀನು ಇಲ್ಲೇ ಎಲ್ಲಾದರೂ ಆಸ್ತಿ ಖರೀದಿಸುವುದು ಒಳ್ಳೆಯದು. ಸುಮ್ಮನೆ ನಾವು ನಾವು ಜಗಳ ಮಾಡಿಕೊಂಡು ನಿಷ್ಠುರ ಆಗುವುದಕ್ಕಿಂತ ಮೊದಲೇ ನೀನು ಬೇರೆ ವ್ಯವಸ್ಥೆ ಮಾಡಿಕೋ"
?? ಗ್ರಜನ ಮಾತು ಕೇಳಿದ ನಂತರ ಆ ಮನೆಯಲ್ಲಿ ನಿಂತರೆ ಮರ್ಯಾದೆಯಿಲ್ಲವೆನಿಸಿತು. ಸ್ವಂತ ?? ಣ್ಣನ ಮಕ್ಕಳೇ ಹೀಯಾಳಿಸುವಾಗ ಶ್ರೀನಿವಾಸನಿಗೆ ದು:ಖವೇ ಬರುತ್ತಿತ್ತು.
"?? ಣ್ಣಯ್ಯ , ಒಂದೆರಡು ತಿಂಗಳು ?? ವಕಾಶ ಕೊಡು. ಎಲ್ಲಾದರೂ ಇದೇ ಊರಿನಲ್ಲಿ ಆಸ್ತಿ ತೆಗೆದುಕೊಂಡು ಸಣ್ಣ ಮನೆ ಕಟ್ಟಿ ಕುಳಿತುಕೊಳ್ಳುತ್ತೇನೆ. ?? ಲ್ಲಿಯವರೆಗೆ..."
ಮುಂದೆ ಮಾತನಾಡಲಾರದೆ ಗಂಟಲುಬ್ಬಿ ಬಂತು.
"ಸರಿ, ನಮ್ಮ ಶ್ಯಾನುಭೋಗರದ್ದೆ ಜಾಗ ಮಾರಾಟಕ್ಕಿದೆ. ನೀನು ದುಡ್ಡಿನ ವ್ಯವಸ್ಥೆಯನ್ನು ಮಾಡು. ಮುಂದೆ ನೋಡೋಣ" ?? ನ್ನುವಾಗಲಷ್ಟೆ ಶ್ರೀನಿವಾಸನ ಮನಸ್ಸಿಗೆ ನೆಮ್ಮದಿಯೆನಿಸಿದ್ದು.
?? ಂಗಡಿಗೆ ಒಂದು ವಾರ ಬಾಗಿಲು ಹಾಕಿ ಮಧುರೈಗೆ ಹೊರಟ ಶ್ರೀನಿವಾಸ. ತಮ್ಮಂದಿರು ಆಪ್ಯಾಯತೆಯಿಂದ ಬರ ಮಾಡಿಕೊಳ್ಳುತ್ತಾರೆನ್ನುವ ನಿರೀಕ್ಷೆ ಹುಸಿಯಾಯಿತು. ?? ಣ್ಣ ಬಂದಿರುವ ವಿಷಯ ?? ವರಿಗೆ ಸ್ಪಷ್ಟವಾಗಿತ್ತು. ?? ದಕ್ಕಾಗಿಯೇ ಇಬ್ಬರೂ ಮುಖ ಗಂಟಿಕ್ಕಿದಂತೆ ಇದ್ದರು. ಶ್ರೀನಿವಾಸ ಕೇಳಿಯೇ ಬಿಟ್ಟ.
"ನಾನೀಗ ತಾಪತ್ರಯದಲ್ಲಿದ್ದೇನೆ. ನನ್ನ ಪಾಲಿನ ಹಣ ನೀವು ಈಗ ಕೊಡದಿದ್ದರೆ ನನ್ನ ಸಂಸಾರ ಬೀದಿಗೆ ಬೀಳುವ ಸ್ಥಿತಿ" ಪೀಠಿಕೆ ಹಾಕುವಾಗ ಹಿರಿಯ ತಮ್ಮ ಗಿರೀಶ ಒಮ್ಮೆಗೆ ಬಿ.ಪಿ. ಏರಿಸಿಕೊಂಡವರಂತೆ ಶ್ರೀನಿವಾಸನ ಎದುರು ಬಂದು ನಿಂತ.
"ಯಾವುದು ನಿನ್ನ ಹಣ? ನಾವು ಯಾಕೆ ಕೊಡಬೇಕು? ನಮಗೆ ಸಂಸಾರ ಇಲ್ವಾ? ನೀನು ಬಿಟ್ಟು ಹೋದ ನಂತರ ವ್ಯಾಪಾರ ?? ಷ್ಟಕಷ್ಟೆ. ನಮಗೂ ಇಲ್ಲಿ ನೆಮ್ಮದಿಯಿಲ್ಲ. ನಾವು ಬಿಟ್ಟು ಬಿಡ್ತಾ ಇದ್ದೇವೆ"
ಗಿರೀಶನ ಮಾತುಗಳನ್ನು ಕೇಳಿ ಶ್ರೀನಿವಾಸನಿಗೆ ಆಕಾಶ ತಲೆಯೆ ಮೇಲೆ ಬಿದ್ದ ಹಾಗಾಯಿತು. ?? ದರೂ ಎದೆಗುಂದದೆ ಹೇಳಿದ.
"ನೀವು, ಕೊಟ್ಟ ಮಾತಿಗೆ ತಪ್ತಾ ಇದ್ದೀರಿ. ನಾನು ಹೇಳಿದ್ನಲ್ಲಾ ನೀವುಗಳು ಹಣ ಕೊಡದಿದ್ದರೆ ನನ್ನ ಸಂಸಾರ ಬೀದಿಗೆ ಬರುತ್ತದೆ. ದಯವಿಟ್ಟು ಇಲ್ಲ ?? ನ್ಬೇಡಿ" ತಮ್ಮಂದಿರಿಗೆ ಕೈ ಮುಗಿದು ಕೇಳುವ ಸ್ಥಿತಿ ಬಂದಾಗ ಮನಸಿನಲ್ಲಿ ನೋವು ಮಡುಗಟ್ಟಿತು.
ಜಗನ್ನಾಥ ಒಳಗೆ ಹೋದವನೇ ಸಿಹಿತಿಂಡಿ ಕತ್ತರಿಸುವ ಚೂರಿಯನ್ನು ತಂದು ಶ್ರೀನಿವಾಸನ ಮುಂದೆ ನಿಂತ.
"ಏನು ನಿನ್ನ ಹಣ ಬಾಕಿಯಿರೋದು? ಏನೂ ಮಾತನಾಡದೆ ಬಂದ ಹಾಗೆ ಹಿಂದೆ ಹೋಗು. ಇಲ್ಲಾಂದ್ರೆ ನೀನು ಇಲ್ಲಿಗೆ ಬಂದೇ ಇಲ್ಲಾಂತ ಮಾಡ್ತೀನಿ"
ಕಿರಿಯ ತಮ್ಮನೂ ಮಿತಿಮೀರಿ ವರ್ತಿಸಿದಾಗ ಶ್ರೀನಿವಾಸ ಭೂಮಿಗಿಳಿದು ಹೋದ. ಹಣವಿಲ್ಲದೆ ಬರಿಗೈಯಲ್ಲಿ ಹೋದರೆ ಆಗುವ ಹೋಗುವ ವಿಚಾರವಲ್ಲವೆಂದು ತಿಳಿಯಿತು.
ತಾನೇ ಮುಂದೆ ತಂದ ತಮ್ಮಂದಿರು ತಿರುಗಿ ನಿಂತಾಗ ?? ಸಹಾಯಕನಂತೆ ಕೈ ಚೆಲ್ಲಿ ಕುಳಿತ.
"ನಾನು ನಿಮ್ಮ ಜೊತೆಗೆ ಜಗಳ ಕಾಯುವುದಕ್ಕೆ ಬಂದಿಲ್ಲ. ನನ್ನ ಹಣ ಕೇಳೊದಿಕ್ಕೆ ಬಂದೆ. ನೀವು ಕೊಡದಿದ್ರೆ ಬೇಡ. ನೀವುಗಳು ಚೆನ್ನಾಗಿರಿ. ಆದರೆ ನಾನು ಬರಿಗೈಯಲ್ಲಿ ಊರಿಗೆ ಹೋದರೆ ?? ಣ್ಣನಿಗೂ ನನ್ನ ಮೇಲೆ ಕೋಪ ಬರುತ್ತೆ. ನನಗೆ ಸಾಲದ ರೂಪದಲ್ಲಿ ಒಂದು ಐವತ್ತು ಸಾವಿರ ಹಣ ಕೊಟ್ರೆ... ನಿಮ್ಮ ಕಷ್ಟ ಕಾಲದಲ್ಲಿ ಹಿಂದಿರುಗಿಸ್ತೇನೆ" ಎಂದು ತಮ್ಮಂದಿರನ್ನು ಕೇಳುವಾಗ ಜಗನ್ನಾಥ, ಗಿರೀಶನ ಕಡೆಗೆ ಕಣ್ಣು ಮಿಟುಕಿಸಿದ.
ಗಿರೀಶ ಒಳಗೆ ಗೋದ್ರೇಜ್ನಿಂದ ಐವತ್ತು ಸಾವಿರ ಎಣಿಸಿ, "ಇದು ಜಗನ್ನಾಥನ ಹಣ. ನೀನು ವಾಪಸು ಕೊಡುವಾಗ ?? ವನಿಗೆ ಕೊಟ್ಟು ಬಿಡು" ಹಣವನ್ನು ಶ್ರೀನಿವಾಸನ ಕೈಯಲ್ಲಿಟ್ಟಾಗ ಶ್ರೀನಿವಾಸನಿಗೆ ಪರ್ವತ ಸಿಕ್ಕಷ್ಟು ಸಂತಸವಾಯಿತು. ತಮ್ಮಂದಿರ ಮನೆಗೂ ಹೋಗದೆ ನೇರವಾಗಿ ರೈಲು ಹಿಡಿದು ಊರು ತಲುಪಿದ.
ಹೆಂಡತಿಯ ಮಾತು ಕೇಳದೆ ?? ವಳನ್ನು ಸಮಾಧನಿಸಿದ.
"ನೋಡು, ಪಟ್ಟಣದ ಬದುಕು ನಮಗೆ ಕಷ್ಟ. ಇಲ್ಲೆ ಶ್ಯಾನುಭೋಗರ ಆಸ್ತಿ ಮಾರೋದಿದೆಯಂತೆ. ಒಳ್ಳೊಳ್ಳೆಯ ಉಳುಮೆಯ ಗದ್ದೆಗಳು. ಆಸ್ತಿ ತೆಗೆದು ಹಾಕಿದರೆ ಮುಂದೆ ಮಕ್ಕಳಿಗೆ ?? ನುಕೂಲವಾಗಬಹುದು. ನಾನು ?? ಣ್ಣನ ಜೊತೆಗೆ ಹೋಗಿ ನೋಡಿಕೊಂಡು ಬರುತ್ತೇನೆ"
"?? ಲ್ಲ, ಈ ಹಳ್ಳಿಯಲ್ಲಿ ಉಳುಮೆಯ ಆಸ್ತಿ ತೆಗೆದು ಹಾಕಿದ್ರೆ, ನಮ್ಮ ಮಕ್ಕಳು ಏನು ಮಾಡಬೇಕು? ?? ವುಗಳಿಗೆ ಗದ್ದೆಯ ಕೆಲಸ ಮಾಡಿ ಗೊತ್ತುಂಟಾ?"
"ನಮಗೆ ಬದುಕ ಬೇಕಾದ್ರೆ ನಮ್ಮ ಮಕ್ಕಳು ಗದ್ದೆಯ ಕೆಲಸ ?? ಲ್ಲ... ಯಾವ ಕೆಲಸವನ್ನಾದ್ರೂ ಕಲಿಬೇಕು. ಮತ್ತೆ ?? ವರಿಗೂ ?? ಭ್ಯಾಸವಾಗುತ್ತದೆ"
ಶ್ರೀನಿವಾಸ ನಳಿನಾಕ್ಷಿಯ ಬಾಯಿ ಮುಚ್ಚಿಸಿದ. ಮರುದಿನ ?? ಗ್ರಜನನ್ನು ಕರೆದುಕೊಂಡು ಶ್ಯಾನುಭೋಗರ ಬಳಿ ಮಾತನಾಡಲು ಹೋದ.
ಶ್ಯಾನುಭೋಗರು ಮೊದಲೆ ತಮ್ಮ ಜಾಗ ಮಾರಾಟ ಮಾಡುವುದೆಂದು ನಿರ್ಧರಿಸಿದ್ದರಿಂದ ಉಟ್ಟ ಬಟ್ಟೆಯಲ್ಲಿಯೆ ಗದ್ದೆಗಳನ್ನು ತೋರಿಸಲು ಹೊರಟರು. ಶ್ರೀನಿವಾಸನಿಗೆ ಗದ್ದೆಗಳೆಲ್ಲ ಹಿಡಿಸಿದವು. ಐವತ್ತು ಸಾವಿರಕ್ಕೆ ಎಲ್ಲವೂ ಇತ್ಯರ್ಥವಾಗಿ ಶ್ರೀನಿವಾಸ ಆ ಆಸ್ತಿಯ ಒಡೆಯನಾದ. ಆತ ಮಾಡಿದ ದೊಡ್ಡ ತಪ್ಪೆಂದರೆ ಗೇಣಿಯನ್ನು ಮುಂದುವರಿಸಿಕೊಂಡು ಬಂದಿದ್ದು. ಮನೆ ಕಟ್ಟಿ ಸಂಸಾರವನ್ನು ನೋಡಿಕೊಳ್ಳುವ ಹೊತ್ತಿಗೆ `ಉಳುವವನೆ ಹೊಲದೊಡೆಯ' ಕಾನೂನು ಬಂದಾಗ ಕಷ್ಟದಲ್ಲಿ ತೆಗೆದುಕೊಂಡ ಆಸ್ತಿಯೂ ಕೈ ಬಿಟ್ಟು ಹೋಯಿತು. ಮದುವೆಗೆ ತಯಾರಾಗಿ ನಿಂತ ಹೆಣ್ಣು ಮಕ್ಕಳಿಗೆ ?? ದು ಹೇಗೋ ನಳಿನಾಕ್ಷಿ ಮಾಡಿಟ್ಟ ಚಿನ್ನವನ್ನು ಮಾರಿ ಮದುವೆ ಮಾಡಿಸಿದ. ಆ ಹೊತ್ತಿಗೆ ಹಿರಿಯ ಮಗ ಕೆಲಸಕ್ಕೆ ಸೇರಿದ್ದರಿಂದ ?? ಷ್ಟಿಷ್ಟು ಮನೆ ಖರ್ಚು ನಡೆಯುತ್ತಿತ್ತು. ಹುಡುಗಿಯರು ಮದುವೆಯಾಗಿ ಹೋದರೂ ?? ವರಿಗೆ ನೆಮ್ಮದಿಯಿರಲಿಲ್ಲ. ಹಿರಿ ಮಗಳು ಉಪಾಸನ ಬಡತನದಲ್ಲಿಯೆ ಸಂಸಾರ ಹೂಡುವಂತಾದರೆ, ಎರಡನೆಯ ಮಗಳು ಆರಾಧನ ಮದುವೆಯಾಗಿ ಆರು ತಿಂಗಳಿನಲ್ಲೇ ತವರು ಸೇರುವಂತಾಯಿತು. ಮೂರನೆಯ ಮಗಳು ?? ರ್ಚನಾಳ ಗಂಡ ಸ್ಫುರದ್ರೂಪಿ ಯುವಕ. ಸ್ವಲ್ಪ ಹೆಣ್ಣುಗಳ ಜೊತೆಗೆ ಮಾತುಕತೆ ನಡೆದಾಗ ಸಂಶಯ ಹೊಂದಿದ ?? ರ್ಚನಾಳಿಗೆ ದಿನ ?? ವನ ಜೊತೆಗೆ ಜಗಳ ಕಾಯುವುದೆ ಆಯಿತು. ನಾಲ್ಕನೆಯವಳು ಪೂಜಾ. ?? ವಳ ಗಂಡನ ಕೈ ಯಾವಾಗಲೂ ತೂತೆ. ಹಾಗಾಗಿ ಹೆಣ್ಣು ಮಕ್ಕಳ ಗೋಳಿನ ಪತ್ರ ಬಂದಾಗಲೆಲ್ಲಾ ಶ್ರೀನಿವಾಸ ಹೈರಾಣಗುತ್ತಿದ್ದ. ನಳಿನಾಕ್ಷಿಗಂತೂ ಕಣ್ಣೀರು ತಪ್ಪಿದಲ್ಲ. ಕೊನೆಗೆ ಆತ ಹಾಸಿಗೆ ಹಿಡಿದ. ಹಾಸಿಗೆ ಹಿಡಿದ ಎರಡು ವಾರಗಳಲ್ಲಿಯೆ ಆತನ ಸಂಸಾರದ ಗಾಲಿ ಕಳಚಿಕೊಂಡಿತು. ಇನ್ನೆರಡು ವರ್ಷಕ್ಕೆ ನಳಿನಾಕ್ಷಿ ಕೂಡ ಗಂಡನ ಕಡೆಗೆ ನಡೆದದ್ದಾಯಿತು. ಆ ಮನೆಯಲ್ಲಿ ನೆಮ್ಮದಿ ?? ಳಿಸಿತು. ಹಿರಿಯ ಮಗ ದೂರವಿದ್ದುದರಿಂದ ಎರಡನೆಯ ಮಗ ಉಳಿದ ಆಸ್ತಿಯ ಜವಾಬ್ದಾರಿಯನ್ನು ಹೊರುವಂತಾಯಿತು.
***
ಹಳೆಯ ನೆನಪುಗಳೆಲ್ಲಾ ಕೆದಕಿ ಆ ರಾತ್ರಿಯಿಡಿ ನಿದ್ದೆ, ವೆಂಕಟಭಟ್ಟನಿಂದ ದೂರವೇ ಉಳಿಯಿತು. ?? ಪ್ಪ ಇಷ್ಟು ಕಷ್ಟ ಬಿಟ್ಟು ಮಾಡಿನ ಆಸ್ತಿಯನ್ನು ಮಾರುವ ಮಾತು ಮುಂದೆ ಈ ಮನೆಯಲ್ಲಿ ಬರಬಾರದೆಂಬ ನಿರ್ಧಾರವನ್ನು ತೆಗೆದುಕೊಂಡ. ವನಜಾಕ್ಷಿ ಪಕ್ಕಕ್ಕೆ ಬಂದು ಮಲಗಿದರೂ ಗೋಚರವಾಗಲಿಲ್ಲ. ತದೇಕ ದೃಷ್ಟಿಯಿಂದ ಸೂರನ್ನೇ ದಿಟ್ಟಿಸುತ್ತಾ ಮಲಗಿದ.
"ರೀ" ವನಜಾಕ್ಷಿಗೂ ನಿದ್ದೆ ಸುಳಿಯದೆ ಗಂಡನನ್ನು ಕರೆದಳು.
"ಏನಾಗ್ಬೇಕು?"
"?? ಲ್ಲ... ನೀವಂದ್ರಿ... ನಮ್ಗೆ ಹೆಣ್ಣು ಸಂತಾನ ?? ಗೊದು ಬೇಡಾಂತ ನಿಮ್ಮ ತಂದೆ-ತಾಯಿಯ ಶಾಪ ಇದೇಂತ, ಇದು ಸತ್ಯಾನಾ? ಯಾರಾದ್ರೂ ತಮ್ಮ ಸ್ವಂತ ಮಕ್ಕಳಿಗೆ ಆ ರೀತಿ ಶಾಪ ಕೊಡ್ತಾರಾ?"
"ನಾನು ಆಗ್ಲೆ ಹೇಳಿದ್ನಲ್ಲಾ... ನಮ್ಮ ಮನೆ ಹೆಣ್ಣುಗಳ ಕಷ್ಟ ನೋಡಿ ಹಾಗೆ ?? ಂದಿರಬಹುದೂಂತ ಹೇಳಿದೆ. ಹಾಗೇ ಇನ್ನೂ ತಿಳಿದುಕೊಳ್ಳುವ ಇಚ್ಛೆ ಇದ್ರೆ ನಾಳೆ ರಾಮ ಜೋಯಿಸರತ್ರ ಹೋಗಿ ಬರೋಣ"
ಗಂಡನ ಮಾತಿನಲ್ಲಿ ವ್ಯಂಗ್ಯವಿದ್ದುದನ್ನು ಗುರುತಿಸಿದ ವನಜಾಕ್ಷಿಗೆ ಮಾತನಾಡಲಾಗದೆ ವಿರುದ್ಧ ದಿಕ್ಕಿಗೆ ಹೊರಳಿ ಮಲಗಿದಳು. ಆದರೆ ಮನಸ್ಸು ತಡೆಯಲಾರದೆ ಮಗ್ಗುಲು ಬದಲಿಸದೆ ಕೇಳಿದಳು.
"ನಮಗೆ ಹೆಣ್ಣು ಮಗು ಆಗೋದಿಲ್ವಾ?"
"ಪದೇ ಪದೇ ?? ದನ್ನು ಕೇಳಬೇಡ. ಹೆಣ್ಣು ಮಗು ಆಗದಿದ್ರೆ ದತ್ತು ತೆಗೆದುಕೊಳ್ಳೋಣ. ಈಗ ಸುಮ್ನೆ ಮಲಗು"
"ಹಾಗಂತೀರಾ? ?? ದು ನಮ್ಮ ಮಗು ಆಗೊದಿಲ್ವಲ್ಲಾ?"
"ಮನಸ್ಸು ಉದಾರವಾಗಿರಲಿ. 0ಾರದ್ದಾದರೇನು, ಜವಾಬ್ದಾರಿ ನಾವು ತೆಗೆದುಕೊಂಡ ನಂತರ ?? ದು ನಮ್ಮದೆ ಮಗು ತಾನೆ?"
"ಹಾಗಾ?"
ಗಂಡನ ಮಾತುಗಳನ್ನು ಮೆಲುಕು ಹಾಕಿಕೊಂಡು ವನಜಾಕ್ಷಿ ಹಾಗೆ ನಿದ್ರೆಗೆ ಜಾರಿದರೆ, ವೆಂಕಟ ಭಟ್ಟರಿಗೂ ಏನೋ ತೃಪ್ತಿಯೆನಿಸಿ ಹಾಗೆ ಕಣ್ಣು ಮುಚ್ಚಿ ನಿದ್ದೆಗೆ ಇಳಿದರು.
****