ಮನುಷ್ಯನ ಬದುಕೇ ಒಂದು ಪಯಣ. ಇದು ನಿರಂತರವೂ ಹೌದು. ?? ವನು ತನ್ನ ಪಯಣದಲ್ಲಿ ಎದುರಿಸ ಬೇಕಾದ ಮತ್ತು ಎದುರಾಗಬಹುದಾದ ಸಂಗತಿಗಳನ್ನು ತಿಳಿದುಕೊಂಡು ತನ್ನ ಪಯಣದ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸುತ್ತಾನೆ. ಆದರೆ ಈ ಪಯಣ ?? ವನ ?? ನುಭವದ ಮೂಟೆಯಾಗಬಹುದು ?? ಥವಾ ಮುಂದಿನ ಪೀಳಿಗೆಯ ಊಹನೆಯೂ ಆಗಿರಬಹುದು. ಇಂತಹ ?? ದೆಷ್ಟೋ ಕಥನಕಗಳು ನಮಗೆ ದೊರೆಯುತ್ತವೆ. ?? ದರಲ್ಲೂ ಪಾಶ್ಚಾತ್ಯರು ಸಾಹಸಿಗಳು ಮತ್ತು ಧೈರ್ಯಶಾಲಿಗಳು. ?? ವರ ಒಂದೊಂದು ಸಾಹಸಗಳೂ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿಯೂ ಹೌದು. ?? ಂತಹ ?? ನುಭವ ಕಥನಗಳು ಓದುಗನಲ್ಲಿಯೂ ಕುತೂಹಲ ಮೂಡಿಸಿ, ಹೊಸದೊಂದು ?? ನುಭವವನ್ನು ಬಿಚ್ಚಿಡುತ್ತವೆ.
?? ಂತಹ ಪಯಣದ, ?? ದರಲ್ಲೂ ಸಮುದ್ರಯಾನದ ಪ್ರಯಾಣವನ್ನು `ಪಶ್ಚಿಮದ ಪಯಣಿಗರು' ?? ನ್ನುವ ಪುಸ್ತಕದ ಮೂಲಕ ಕನ್ನಡಿಗರಿಗಾಗಿ ?? ನುವಾದಿಸಿರುವವರು ಬಿ. ಎಸ್. ವಿದ್ಯಾರಣ್ಯರವರು.
ಈ ಬೃಹತ್ ಪುಸ್ತಕದಲ್ಲಿ ಯೂರೋಪಿನ ಲೇಖಕರು ಬರೆದಿರುವ ಮೂರು ವಿಭಿನ್ನ ರೀತಿಯ ಪ್ರಯಾಣದ ಕಾದಂಬರಿಗಳಿವೆ. ಮೂಲ ಕಾದಂಬರಿಯನ್ನು ಓದಿದಷ್ಟೇ ಆಪ್ತವೆನಿಸುವ ಇಲ್ಲಿಯ ಕಾದಂಬರಿಗಳೆಲ್ಲಾ ಬೇರೆ ಬೇರೆ ಭೌಗೋಳಿಕ ಹಿನ್ನಲೆಯಿರುವ ಜನರ, ಸಮಾಜದ, ಸಂಸ್ಕೃತಿಯ ಮತ್ತು ?? ಲ್ಲಿನ ಮೌಲ್ಯಗಳನ್ನು ಎದುರಿಸುವ ಮತ್ತು ?? ಲ್ಲಿ ತನ್ನ ಸರ್ವಾಧಿಕಾರ ಸಾಧಿಸಲು ಪ್ರಯತ್ನಿಸುವ ?? ಧಿಕಾರ ಶಾಹಿ ವರ್ಗವನ್ನು ವಿಢಂಬನಾತ್ಮಕವಾಗಿ ತೆರೆದಿಡುವುದಲ್ಲದೆ ಮುಂದೆ ನಡೆಯಬಹುದಾದ ಸರ್ವಾಧಿಕಾರ ಧೋರಣೆಗಳನ್ನು ಸೂಕ್ಷ್ಮವಾಗಿ ಪರಿಚಯಿಸುತ್ತವೆ.
ಈ ಪುಸ್ತಕದಲ್ಲಿ ಕಾದಂಬರಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವಿಭಾಗದಲ್ಲಿ ಜೋನಥಾನ್ ಸ್ವಿಫ್ಟ್‍ನ `ಗಲಿವರಾಯಣ', ಎರಡನೆ ವಿಭಾಗದಲ್ಲಿ ಡೇನಿಯಲ್ ಡೀಫೋನ `ರಾಬಿನ್‍ಸನ್ ಕ್ರುಸೋ' ಮತ್ತು ಮೂರನೆ ವಿಭಾಗದಲ್ಲಿ ಜೂಲ್ಸ್ ವರ್ನ್‍ನ ` 80 ದಿನಗಳಲ್ಲಿ ಭೂಪ್ರದಕ್ಷಿಣೆ' ಕಾದಂಬರಿಗಳಿವೆ.
ಗಲಿವರಾಯಣದಲ್ಲಿ ಮೂರು ಕಾದಂಬರಿಗಳಿವೆ. ನಮಗೆಲ್ಲಾ ಗೊತ್ತಿರುವ ಗಲಿವರಾಯಣದ ಕಥೆ ಲಿಲಿಪುಟ್‍ಗಳ ದೇಶದ ಕಥೆ. ಸಾಧಾರಣವಾಗಿ ಪ್ರಾಥಮಿಕ ಶಾಲೆಯಿಂದಲೇ ಈ ಕಥೆಯನ್ನು ಓದಿರುತ್ತೇವಾದರೂ ಇಡೀ ಕಥೆಯನ್ನು ಆಸ್ವಾಧಿಸಬೇಕಾದರೆ ಗಲಿವರಾಯಣದ ಮೊದಲ ಕಾದಂಬರಿ `ಲಿಲಿಪುಟ್‍ಗಳ ನಾಡಿನಲ್ಲಿ' ?? ನ್ನು ಓದಲೇಬೇಕು.
ಗಲಿವರ್ ಒಬ್ಬ ವೈದ್ಯನಾಗಿ ನಾವಿಕನಾಗುವ ಕನಸು ಕಾಣುತ್ತಾನೆ. ?? ವನು ಹಡಗಿನಲ್ಲಿ ವೈದ್ಯನಾಗಿಯೂ ಸೇರುತ್ತಾನೆ. ?? ಲ್ಲಿಂದ ?? ವನ ಸಮುದ್ರಯಾನ ಆರಂಭವಾಗುತ್ತದೆ. ?? ವನ ಹಡಗು ?? ಲೆಗಳ ಹೊಡೆತಕ್ಕೆ ಸಿಕ್ಕಿ ?? ಪಘಾತವಾಗುತ್ತದೆ. ?? ಲ್ಲಿಂದ ಬದುಕುಳಿದ ತನ್ನ ಸಹಪ್ರಯಾಣಿಕರ ಜೊತೆಗೆ ದೋಣಿಯಲ್ಲಿ ಕುಳಿತು ದಡ ತಲುಪುವ ಪ್ರಯತ್ನ ಮಾಡುತ್ತಾನೆ. ದೋಣಿ ಕೂಡ ದುರಂತಕ್ಕೀಡಾಗಿ ?? ವನೊಬ್ಬನೇ ?? ಪರಿಚಿತ ನಾಡಿಗೆ ಬರುತ್ತಾನೆ. ?? ವನಿಗೆ ಬೆಳಿಗ್ಗೆ ಎಚ್ಚರವಾದಾಗ ಇರುವೆಯಂತ ಪುಟಾಣಿ ವೀರರು ?? ವನನ್ನು ಬಂಧಿಸಿರುತ್ತಾರೆ. ಆ ಲಿಲಿಪುಟ್‍ಗಳ ಭಾಷೆ ?? ರ್ಥವಾಗದೆ ಸನ್ನೆಯಲ್ಲಿ ತನ್ನ ಬಾಯಾರಿಕೆ, ಹಸಿವುಗಳನ್ನು ತಿಳಿಸುತ್ತಾನೆ. ?? ವನ ಸನ್ನೆಯನ್ನು ?? ರ್ಥೈಸಿಕೊಂಡು ?? ವನಿಗೆ ಬೇಕಾದ ಆಹಾರ, ಪಾನೀಯಗಳನ್ನು ಒದಗಿಸುತ್ತಾರೆ. ಆ ದೇಶದ ರಾಜನ ವಿಶ್ವಾಸ ಗೆದ್ದು ?? ವರಲ್ಲಿಯೇ ಒಬ್ಬನಾಗುತ್ತಾನೆ ಗಲಿವರ್. ಆದರೂ ?? ಲ್ಲಿಯ ?? ರಸನಿಗೆ ಗಲಿವರನ ಮೇಲೆ ಸಂಶಯವಿರುತ್ತದೆ. ಇದಕ್ಕೆ ಕಾರಣ ಆತ ಒಮ್ಮೆ ಲಿಲಿಪುಟ್ ಜನರಿಂದ ತಪ್ಪಿಸಿಕೊಂಡು ಬ್ಲೆಫೆಸ್ಕೋದ ಜನರನ್ನು ಭೇಟಿಯಾಗಿರುತ್ತಾನೆ. ಬ್ಲೆಫೆಸ್ಕೋ ?? ರಸನ ವಿರೋಧಿಯಾಗಿರುವ ಲಿಲಿಪುಟ್ ?? ರಸ ಮುಂದೆ ಗಲಿವರನ ಸಹಾಯದಿಂದ ?? ವನನ್ನು ಎದುರಿಸಲು ಸಿದ್ಧವಾಗುತ್ತಾನೆ. ಆದರೆ ಆ ಎರಡು ದೇಶಗಳ ನಡುವೆ ಶಾಂತಿ, ಸಂಧಾನಕ್ಕೆ ನೆರವಾಗುತ್ತಾನೆ ಗಲಿವರ್. ಕೊನೆಗೆ ತನ್ನ ದೇಶಕ್ಕೆ ಹಿಂತಿರುಗಬೇಕೆನ್ನುವ ?? ವನ ತುಡಿತದಂತೆ ಗಲಿವರ ಬ್ಲೆಫೆಸ್ಕೋದ ?? ರಸನ ಸಹಾಯದಿಂದ ತನ್ನ ದೇಶಕ್ಕೆ ಮರಳುವುದರೊಂದಿಗೆ ಕಾದಂಬರಿ ಮುಗಿಯುತ್ತದೆ. ಹಿರಿ ಕಿರಿಯರಿಂದ ಎಲ್ಲರಿಗೂ ಆಪ್ತವೆನಿಸುತ್ತದೆ ಈ ಕಾದಂಬರಿ.
ಗಲಿವರನ ಮುಂದಿನ ಪಯಣ ಬ್ರಾಬ್ಡಿಂಗ್‍ನ್ಯಾಗ್ ನಾಡಿನ ಪ್ರವಾಸ. ?? ಲ್ಲಿ ಲಿಲಿಪುಟ್‍ಗಳ ಹಾಗೇ ಆದರೆ ವ್ಯತಿರಿಕ್ತವಾಗಿರುವ ದೈತ್ಯ ಜನರ ದರ್ಶನವಾಗುತ್ತದೆ. ಒಬ್ಬ ರೈತನ ಕೈಗೆ ಸಿಕ್ಕಿ, ?? ವನ ಕೈಗೊಂಬೆಯಾಗುತ್ತಾನೆ. ಆ ರೈತ ?? ವನನ್ನು ಒಬ್ಬ ಜೋಕರ್‍ನ ಹಾಗೆ ನಡೆಸಿಕೊಳ್ಳುತ್ತಾನೆ. ಮಾತ್ರವಲ್ಲ, ?? ವನನ್ನು ಪ್ರದರ್ಶನಕ್ಕಿಟ್ಟು ಹಣಗಳಿಸುತ್ತಾನೆ. ಇದರಿಂದ ?? ವನಿಗೆ ತುಂಬಾ ಬೇಸರವಾಗುತ್ತದೆ. ಬಂಧನದಿಂದ ಮುಕ್ತಿ ಹೊಂದಬೇಕೆನ್ನುವ ?? ದಮ್ಯ ಬಯಕೆಯಿರುತ್ತದೆ. ಆದರೆ ಆ ರೈತ, ತನಗೆ ?? ವನು ಇನ್ನು ಉಪಯೋಗವಿಲ್ಲವೆನ್ನುವ ನಿರ್ಧಾರಕ್ಕೆ ಬಂದು ?? ವನನ್ನು ಆ ನಾಡಿನ ರಾಜನಿಗೆ ಮಾರುತ್ತಾನೆ. ಇವನ ಮೋಜನ್ನು ಮೆಚ್ಚಿಕೊಳ್ಳುವ ರಾಜನ ಪರಿವಾರ ?? ವನೊಂದಿಗೆ ?? ನ್ಯೋನ್ಯವಾಗಿರುತ್ತದೆ. ?? ಲ್ಲಿಯ ಭಾಷೆಯನ್ನು ಕಲಿತು ರಾಣಿಯ ಮನಸ್ಸನ್ನೂ ಗೆದ್ದು ?? ರಮನೆಯಲ್ಲಿ ಉಳಿಯುತ್ತಾನೆ. ಕೊನೆಗೆ ತಾನು ಸ್ವತಂತ್ರವಾಗಿ ಜೀವಿಸಲು ಹಾತೊರೆದು ?? ಲ್ಲಿಂದ ಹೊರಗೆ ಬರುತ್ತಾನೆ. ಬಲಶಾಲಿಗಳ ಮುಂದೆ ಬಲಹೀನರ ಪಾಡನ್ನು ತೆರೆದಿಡುತ್ತದೆ ಈ ಕಾದಂಬರಿ.
ಇನ್ನು ಮೂರನೆಯ ಕಾದಂಬರಿ `ಹ್ವಿನಿಮ್ ನಾಡಿನ ಪ್ರವಾಸ'; ಬಹಳ ಕುತೂಹಲಕರವಾಗಿಯೂ, ವಿಚಿತ್ರವಾದ ?? ನುಭವಕ್ಕೂ ಒದಗುವ ಕಥೆ. ಹ್ವಿನಿಮ್‍ಗಳ ನಾಡಿನಲ್ಲಿ ಮನುಷ್ಯರೇ ಇಲ್ಲ! (ಈ ಕಲ್ಪನೆಯೇ ವಿಚಿತ್ರವಾಗಿದೆ) ಬದಲಾಗಿ ?? ಲ್ಲಿ ಹ್ವಿನಿಮ್ (ಕುದುರೆ)ಗಳದ್ದೇ ಕಾರುಬಾರು. ಬುದ್ಧಿಜೀವಿಗಳೆಂದು ತಮ್ಮನ್ನು ತಾವು ಗುರುತಿಸಿರುವ ಆ ಹ್ವಿನಿಮ್‍ಗಳು ಯಾಹು (ಗೋರಿಲ್ಲಗಳನ್ನು ನೆನಪಿಸುವಂತ ಪ್ರಾಣಿ) ಗಳನ್ನು ತಮ್ಮ ?? ಡಿಯಾಳನ್ನಾಗಿ ಮಾಡಿಕೊಂಡಿರುತ್ತವೆ. ಆ ಯಾಹುಗಳು ಎಷ್ಟು ಗಲೀಜಾಗಿರುತ್ತವೆಯೆಂದರೆ ಯಾರೂ ?? ವುಗಳ ಹತ್ತಿರ ಸುಳಿಯುವುದಿಲ್ಲ! ಇಲ್ಲಿ ಶೋಷಿತ ವರ್ಗವನ್ನು ನೆನಪಿಸುವ ಯಾಹುಗಳು ಮತ್ತು ?? ಧಿಕಾರಿ ವರ್ಗದ ಹ್ವಿನಿಮ್‍ಗಳು ?? ಲ್ಲಿಗೆ ಬರುವ ನಾಯಕ ಗಲಿವರನನ್ನು ವಿಚಿತ್ರವಾಗಿ ಕಾಣುತ್ತವೆ. ಯಾಹುಗಳಂತೆ ಕಾಣುವ ?? ವನನ್ನು ಹ್ವಿನಿಮ್‍ಗಳು ಒಪ್ಪಿಕೊಳ್ಳುವುದಿಲ್ಲ. ಕೊನೆಗೆ ?? ವನ ಬುದ್ಧಿವಂತಿಕೆಯನ್ನು ಕಂಡು ?? ವನಿಗೆ ಬೇಕಾಗುವ ಎಲ್ಲಾ ಸಹಾಯವನ್ನೂ ಮಾಡುತ್ತವೆ. ಮುಂದೆ ನಾಯಕ ?? ವನು ?? ಲ್ಲಿಯ ಭಾಷೆಯನ್ನು ಕಲಿತು, ?? ಲ್ಲಿನ ರೀತಿ ನೀತಿಗಳನ್ನು ತನಗರಿವಿಲ್ಲದಂತೆ ತನ್ನ ಬದುಕಿನಲ್ಲೂ ಒಗ್ಗಿಸಿಕೊಂಡಿರುತ್ತಾನೆ. ?? ವನ ಈ ಬದಲಾವಣೆ ?? ವನಿಗೆ ಹಡಗಿನಲ್ಲಿ ಮರಳಿ ತನ್ನ ನಾಡಿಗೆ ಬರುವಾಗ ?? ನುಭವಕ್ಕೆ ಬರುತ್ತದೆ.
ಈ ಮೂರು ಕಾದಂಬರಿಗಳಲ್ಲಿಯೂ ಕಾಣುವ ಸಾಮಾನ್ಯ ವಿಷಯವೆಂದರೆ ಬಲಶಾಲಿಯಾದ ಮನುಷ್ಯ ತನ್ನ ?? ಧಿಕಾರದಿಂದ ಬಲಹೀನರನ್ನು ಶೋಷಣೆ ಮಾಡುತ್ತಾ ?? ವರನ್ನು ತನ್ನ ಸ್ವಾಧೀನಕ್ಕೆ ಒಳಪಡಿಸುತ್ತಾನೆ. ?? ಲ್ಲಿ ತನ್ನ ಪ್ರಾಬಲ್ಯವನ್ನು ತೋರಿಸುತ್ತಾನೆ.
ಡೇನಿಯಲ್ ಡೀಫೋನ ಕಾದಂಬರಿ ರಾಬಿನ್ ಕ್ರೂಸೋದಲ್ಲಿ ಪಾಶ್ಚಿಮಾತ್ಯರ ಸಾಹಸಗಾಥೆಯನ್ನು ತೆರೆದಿಡುತ್ತದೆ. ರಾಬಿನ್ ಕ್ರೂಸೋ ತನ್ನ ?? ನ್ವೇಷಣಾ ಬುದ್ಧಿಯಿಂದ ತಾನು ಪ್ರಯಾಣಿಸುತ್ತಿರುವ ಹಡಗು ?? ಪಘಾತವಾದಾಗ ಒಬ್ಬಂಟಿಯಾಗಿ ದ್ವೀಪಕ್ಕೆ ಬಂದು ?? ಲ್ಲಿ ತನಗೆ ಬೇಕಾದ ಹಾಗೆ ಬದುಕುತ್ತಾನೆ. ಮೇಲ್ನೋಟಕ್ಕೆ ಮನುಷ್ಯನ ಏಕಮುಖವನ್ನು ಪರಿಚಯಿಸಿದರೂ ಇಲ್ಲಿ ಮನುಷ್ಯ ಹೇಗೆ ಒಂದು ಕಡೆ ನೆಲೆ ನಿಂತು ತನಗೆ ಬೇಕಿದ್ದವುಗಳನ್ನು ತನ್ನ ಸುತ್ತಮುತ್ತಲಿಂದ ಗಳಿಸಿಕೊಳ್ಳುತ್ತಾನೆ ?? ನ್ನುವುದನ್ನು ಚಿತ್ರಿಸಿದೆ ಈ ಕಾದಂಬರಿ. ಮಾತ್ರವಲ್ಲ, ?? ಲ್ಲಿ ಎದುರಾಗುವ ಭೌಗೋಳಿಕ ?? ನಾಹುತಗಳು, ಸಮಸ್ಯೆಗಳು, ತೊಂದರೆಗಳನ್ನು ಹೇಗೆ ನಿಭಾಯಿಸಿಕೊಳ್ಳುತ್ತಾನೆ ಮತ್ತು ?? ವುಗಳನ್ನು ಎದುರಿಸಿ ಭದ್ರವಾಗಿ ನೆಲೆಯೂರುತ್ತಾನೆನ್ನುವುದನ್ನು ಸ್ಪಷ್ಟಪಡಿಸುತ್ತದೆ.
ಇನ್ನು ಮೂರನೆಯ ವಿಭಾಗದಲ್ಲಿರುವ ಕಾದಂಬರಿ ಜೂಲ್ಸ್ ವರ್ನ್‍ನ ` 80 ದಿನಗಳಲ್ಲಿ ಭೂ ಪ್ರದಕ್ಷಿಣೆ' ಕುತೂಹಲ ಭರಿತ ಕಾದಂಬರಿ. ಶ್ರೀಮಂತ, ಪ್ರಾಮಾಣಿಕ ಮತ್ತು ಗಂಭೀರ ವ್ಯಕ್ತಿತ್ವದ ಒಬ್ಬಂಟಿ ಫಿಲಿಯಾಸ್ ಫಾಗ್ ತನ್ನ ಸ್ನೇಹಿತರೊಂದಿಗೆ ಪಂದ್ಯ ಕಟ್ಟಿ ಭೂ ಪ್ರದಕ್ಷಿಣೆ ಮಾಡಿಕೊಂಡು ಬರುವ ಕಥಾ ವಸ್ತುವಿರುವ ಈ ಕಾದಂಬರಿ ಕೊನೆಯವರೆಗೂ ಉಸಿರು ಬಿಗಿ ಹಿಡಿದು ಓದುವಂತೆ ಪ್ರೇರೆಪಿಸುತ್ತದೆ. ಆಗಿನ ಕಾಲದಲ್ಲಿ ಹಡುಗು ಮತ್ತು ರೈಲುಗಳ್ಳಲ್ಲಿಯೇ ಭೂ ಪ್ರದಕ್ಷಿಣೆ ಮಾಡುವುದೆಂದರೆ ಊಹೆಗೂ ನಿಲುಕದ ವಿಷಯ. ಫಾಗ್ ತನ್ನ ಹೊಸ ಕೆಲಸದಾಳು ಪಾಸ್ ಪರೋತನ ಜೊತೆಗೆ ಲಂಡನ್‍ನಿಂದ ತಮ್ಮ ಪ್ರಯಾಣ ಆರಂಭಿಸುತ್ತಾರೆ. ಆ ಸಮಯದಲ್ಲಿ ಲಂಡನ್‍ನ ಬ್ಯಾಂಕೊಂದರಲ್ಲಿ ದರೋಡೆಯಾಗಿರುತ್ತದೆ. ಫಾಗ್ ಭೂ ಪ್ರದಕ್ಷಿಣೆ ಹೊರಡುವುದನ್ನು ತಿಳಿದಿರುವ ಪತ್ತೇದಾರ ಫಿಕ್ಸ್, ?? ಷ್ಟೊಂದು ಹಣವನ್ನು ಖರ್ಚು ಮಾಡಿಕೊಂಡು ಭೂ ಪ್ರದಕ್ಷಿಣೆ ಹೊರಟ ಫಾಗೇ ಬ್ಯಾಂಕ್‍ನ ಹಣ ಕದ್ದಿರುವ ವ್ಯಕ್ತಿಯೆಂದು ?? ವರನ್ನು ಹಿಂಬಾಲಿಸಿ ಬರುತ್ತಾನೆ. ?? ವರನ್ನು ಬಂಧಿಸುವಲ್ಲಿ ವಾರಂಟ್ ಬರದೆ ಪ್ರತೀ ಪ್ರಯಾಣದಲ್ಲಿಊ ವಿಳಂಭವಾಗುತ್ತದೆ. ಬ್ರಿಟಿಷರ ವಸಹಾತಿನಲ್ಲೇ ?? ವರನ್ನು ಬಂಧಿಸಬೇಕೆಂದು ತುದಿಗಾಲಲ್ಲಿ ನಿಂತಿರುತ್ತಾನೆ. ಆದರೆ ವಾರೆಂಟ್ ?? ವನ ಕೈ ಸೇರುವಲ್ಲಿ ವಿಳಂಭವಾಗಿರುತ್ತದೆ. ತಮ್ಮ ನಿಗಧಿತ ಸಮಯದಂತೆ ಪ್ರಯಾಣ ಮುಂದುವರಿಸುವಲ್ಲಿ ಫಾಗ್‍ರವರಿಗೆ ?? ಡೆತಡೆಗಳಾಗುತ್ತವೆ. ಭಾರತದಲ್ಲಿ ಸತಿಗೆ ಹೋಗಬೇಕಿರುವ ಹೆಣ್ಣು ಔದಾಳನ್ನು ರಕ್ಷಿಸಲು ಹೋಗಿ ತಾವೇ ಆಪತ್ತಿನಲ್ಲಿ ಸಿಲುಕುತ್ತಾರೆ. ನಂಬಿಕಸ್ಥ ಆಳು ಪಾಸ್ ಪರೋತನ ಚಾಣಾಕ್ಷ ಬುದ್ಧಿಯಿಂದ ಪ್ರತಿಯೊಂದು ಸಂಕಂಟದಿಂದಲೂ ಪಾರಾಗುತ್ತಾರೆ. ಆಯಾ ದೇಶಗಳಿಗನುಗುಣವಾಗಿ ತಮ್ಮ ಕೈ ಗಡಿಯಾರದ ಸಮಯವನ್ನು ಬದಲಾಯಿಸುವ ಫಾಗ್ ಮತ್ತು ತಾನು ಹೊರಟಲ್ಲಿಂದ ಸಮಯವನ್ನು ಸರಿಹೊಂದಿಸದ ಪಾಸ್ ಪರೋತ, ಸತಿಯ ಹೆಣ್ಣು ಔದಾ, ಪತ್ತೇದಾರ ಫಿಕ್ಸ್ ಎಲ್ಲರೂ ತಮ್ಮ ತಮ್ಮ ಗುರಿ ತಲುಪುದನ್ನೇ ಕಾಯುತ್ತಿರುತ್ತಾರೆ. ಕೊನೆಗೂ ಬ್ರಿಟನ್ ತಲುಪುವ ಮೊದಲೇ ಪತ್ತೇದಾರ ಫಿಕ್ಸ್ ?? ವರನ್ನು ಬಂಧಿಸುತ್ತಾನೆ. ಆದರೆ ?? ವರು ನಿರಪರಾಧಿ ಎಂದು ಸಾಬೀತಾಗುತ್ತದೆ. ಇದರಿಂದಾಗಿ ಎರಡು ದಿವಸಗಳಷ್ಟು ತಡವಾಗಿ ತಮ್ಮ ಗಮ್ಯ ತಲುಪುತ್ತಾರೆ ಫಾಗ್. ನೊಂದ ?? ವರು ತನ್ನನ್ನು ನಂಬಿ ಬಂದ ಔದಾಳಿಗೂ ಏನಾದರೊಂದು ದಾರಿ ಮಾಡಿಕೊಡುವುದೆಂದು ನಿರ್ಧರಿಸುವಾಗ ?? ವಳು ತನ್ನ ಮನಸ್ಸಿನಲ್ಲಿರುವುದನ್ನು ಹೇಳುತ್ತಾಳೆ. ?? ವಳನ್ನು ಮದುವೆಯಾಗಲು ಮುಂದಾಗುವ ಫಾಗ್ ಮದುವೆಯ ದಿನವನ್ನು ನಿರ್ಧರಿಸಲು ಪಾಸ್ ಪರೋತನನ್ನು ಚರ್ಚಿಗೆ ಕಳುಹಿಸುತ್ತಾರೆ. ಆಗ ಶನಿವಾರದಂದು ಮದುವೆ ಸಾಧ್ಯವಿಲ್ಲವೆಂದು ಹಿಂದಕ್ಕೆ ಬರುತ್ತಾನೆ ಪಾಸ್ ಪರೋತ. ಸತ್ಯದ ?? ರಿವಾಗುವುದು ಆಗ. ಸಮಯ ಬದಲಾಯಿಸದ ಪಾಸ್ ಪರೋತನ ಗಡಿಯಾರ ಸತ್ಯವನ್ನು ಬಿಚ್ಚಿಡುತ್ತದೆ. ?? ವರಿಗೆ ಆಶ್ಚರ್ಯವಾಗಿ ದಿನಗಳನ್ನು ಲೆಕ್ಕ ಹಾಕುತ್ತಾರೆ. ಪಂದ್ಯ ಮುಗಿಯಲು ಇನ್ನೂ ಕೆಲವೇ ಕ್ಷಣಗಳಿದ್ದಾಗ ಫಾಗ್ ತಮ್ಮ ಸ್ನೇಹಿತರನ್ನು ಭೇಟಿಯಾಗಲು ?? ಲ್ಲಿಗೆ ಹೋಗುತ್ತಾರೆ. ಪಂದ್ಯದಲ್ಲಿ ಗೆದ್ದ ?? ವರನ್ನು ಸ್ನೇಹಿತರೆಲ್ಲಾ ?? ಭಿನಂದಿಸುತ್ತಾರೆ. ಈ ಬೃಹತ್ ಪುಸ್ತಕದ ಐದು ಕಾದಂಬರಿಗಳಲ್ಲಿಯೂ ತುಂಬಾ ಆಪ್ತವೆನಿಸುವ ಕಾದಂಬರಿ ಇದು. ?? ದಕ್ಕೆ ಕಾರಣ ಫಾಗ್‍ರವರ ಪ್ರಯಾಣ ಭಾರತದ ಮೂಲಕ ನಡೆಯುವುದು ಆಗಿರಬಹುದು. ಇಲ್ಲಿನ ಭೌಗೋಳಿಕ ಹಿನ್ನಲೆ, ಪದ್ಧತಿಗಳು, ಆಚಾರ ವಿಚಾರಗಳು ಈ ಕಾದಂಬರಿಯಲ್ಲಿ ಕಾಣಸಿಗುತ್ತದೆ.
ಹೀಗೆ ಈ ಮೂರು ವಿಭಾಗಳಲ್ಲಿಯೂ ವಿಭಿನ್ನ ಕಾದಂಬರಿಗಳಿದ್ದು ಎಲ್ಲವೂ ಒಂದೊಂದು ರೀತಿಯ ಪ್ರಯಾಣದ ?? ನುಭವವನ್ನು ನೀಡುತ್ತವೆ. ಇಲ್ಲಿ ಆಪ್ಯವೆನಿಸುವುದು ವಿದ್ಯಾರಣ್ಯರ ಭಾಷಾ ಹಿಡಿತ. ಮೂಲ ಕಾದಂಬರಿಯನ್ನು ಓದಿದಷ್ಟೇ ಸುಖ ಇಲ್ಲಿದೆ. ನಿಜವಾಗಿಯೂ ಕನ್ನಡಕ್ಕೆ ಈ ಕಾದಂಬರಿಗಳನ್ನು ತುರ್ಜುಮೆ ಮಾಡಿರುವ ಲೇಖಕರು ?? ಭಿನಂದನಾರ್ಹರು.
ಈ ಕಾದಂಬರಿ ಚಾರುಮತಿ ಪ್ರಕಾಶನ, 12, 10ನೇ ಮುಖ್ಯ ರಸ್ತೆ, ಶ್ರೀನಗರ, ಬೆಂಗಳೂರು - 560 050; ಫೋ.ಸಂ.94428 35553 ಇವರು ಪ್ರಕಟಿಸಿದ್ದಾರೆ. ಪುಸ್ತಕದ ಬೆಲೆ ರೂ. 280/- ಮಾತ್ರ. ಪುಟಗಳು - 552