ಖಾಸನೀಸರ ಕಥೆಗಳು: ಸ್ವಾರಸ್ಯಕರ, ಕುತೂಹಲ ಮತ್ತು ಕೆಲವೊಂದು ಜೀವನ ಮೌಲ್ಯಗಳನ್ನು ತಿಳಿಸುವ ?? ಪರೂಪದ ಕಥಾ ಗುಚ್ಛ. ಇಲ್ಲಿಯ ಐದು ಕಥೆಗಳು ಸರ್ವೆ ಸಾಮಾನ್ಯ ನೀಳ್ಗತೆಗಳೆ. ಪುಟಗಳ ಪರಿಮಿತಿಯಿಲ್ಲದೆ ಬೆಳೆದ ಈ ಕಥೆಗಳು ಎಲ್ಲೂ ಬೋರ್ ಹೊಡೆಸುವುದಿಲ್ಲ. ಬದಲಾಗಿ ಸರಳವಾಗಿ ಓದಿಸಿಕೊಂಡು ಹೋಗುತ್ತವೆ. ಇಲ್ಲಿಯ ‘?? ಪಘಾತ’ ಕಥೆಯ ರಾಮನಾಥ, ‘ಹೀಗೂ ಇರಬಹುದು’ ಕಥೆಯ ಲಕ್ಷ್ಮಣ, ‘ತಬ್ಬಲಿಗಳು’ ಕಥೆಯ ತಂದೆ, ತಾಯಿ, ತಮ್ಮ ಮತ್ತು ತಂಗಿ ಪಾತ್ರಗಳು, ‘?? ಲ್ಲಾಉದ್ದೀನನ ?? ದ್ಭುತ ದೀಪ’ ಕಥೆಯ ವಾಸು ಮತ್ತು ‘ಮೋನಾಲೀಸಾ’ ಕಥೆಯ ಪೆರ್ರೂಗಿ ಪಾತ್ರಗಳು ಕಥೆಗಳಿಗೆ ಜೀವಂತಿಕೆ ತುಂಬಿವೆ.
‘?? ಪಘಾತ’ ಕಥೆಯ ನಾಯಕ ಸಾವಿಗೆ ?? ರ್ಥವಿಲ್ಲದ ಮುಂಬೈನ ಜೀವನದಲ್ಲಿ ಸ್ವಾಲಂಬಿಯಾಗಿ ಬದುಕುತ್ತಿರುವವನು ವಕೀಲ ರಾಮನಾಥ. ಒಮ್ಮೆ ತನ್ನ ಬಾಲ್ಯದ ನೆನಪುಗಳಲ್ಲಿ ಸೋತು ಹೋದ ನಿರ್ವೀಣ್ಯ ಮನೋಸ್ಥಿತಿಯಲ್ಲಿದ್ದಾಗಲೇ ?? ತೀ ಶುಭ್ರ ಪಾರದರ್ಶಕ ಬಟ್ಟೆ ಧರಿಸಿದ್ದ ಯುವತಿಯನ್ನು ನೋಡುತ್ತಾನೆ. ?? ವಳೂ ಪರಿಚಿತಳಂತೆ ನಗು ಬೀರುತ್ತಾಳೆ. ಮಾತ್ರವಲ್ಲ ಕಾಮುಕ ದೃಷ್ಟಿಯಿಂದ ?? ವನನ್ನು ಸೆಳೆಯಲು ಪ್ರಯತ್ನಿಸುತ್ತಾಳೆ. ?? ದೇ ಯುವತಿ ರೈಲಿನಲ್ಲಿಯು ಎದುರಾಗುತ್ತಾಳೆ. ಆಗ ಆ ಕಂಪಾರ್ಟ್ ಮೆಂಟ್ನಲ್ಲಿ ?? ವರಿಬ್ಬರೇ ಇರುತ್ತಾರೆ. ತನ್ನ ತೆಕ್ಕೆಗೆ ಬೀಳದ ವ್ಯಕ್ತಿಯೊಬ್ಬನಿದ್ದಾನೆ ?? ನ್ನುವ ?? ಸಹನೀಯ ವಿಚಾರ ?? ವಳ ಮನಸ್ಸನ್ನು ಕೆಡಿಸುತ್ತದೆ. ?? ವಳು ?? ವನನ್ನು ಇಕ್ಕಟಿಗೆ ಸಿಲುಕಿಸಿ ?? ವರ ಹಣವನ್ನು ದೋಚುವ ಪ್ರಯತ್ನ ಮಾಡುತ್ತಾಳೆ. ?? ದಕ್ಕೆಲ್ಲಾ ಜಗ್ಗದ ರಾಮನಾಥನಿಗೆ, ‘ತನ್ನನ್ನು ಬಲಾತ್ಕರಿಸಲು ಬಂದ’ನೆನ್ನುವ ಆರೋಪವನ್ನು ಹೊರಿಸಿ ಪೊಲೀಸರಿಗೂ ತಿಳಿಸುತ್ತಾಳೆ. ಆದರೆ ಇದರಿಂದ ವಿಚಲಿತನಾಗದ ಆತ ತಾನು ನಿರಪರಾಧಿ ?? ನ್ನುವುದಕ್ಕೆ ಸಾಕ್ಷಿಯೆನ್ನುವಂತೆ ಎಲ್ಲರ ಸಮಕ್ಷಮದಲ್ಲಿ ತನ್ನ ಕೋಟನ್ನು ತೆಗೆಯುತ್ತಾನೆ. ಆತನಿಗೆ ಎರಡು ಕೈಗಳಿರುವುದಿಲ್ಲ. ಹಾಗಿರುವಾಗ ಬಲಾತ್ಕರಿಸುವ ಪ್ರಮೆಯವಿದೆಯೇ?
ಸಾಮಾಜಿಕ ನಿಯಮ- ನಿರ್ಬಂಧಗಳ ಮೂಲಕ ಹೆಣ್ಣು ಗಂದಿನ ಸಂಬಂಧ ವಿಷಯಕವಾದ ತೊಡಕುಗಳು ತಲೆದೋರುತ್ತವೆ. ‘ಹೀಗೂ ಇರಬಹುದು’ ಕಥೆಯಲ್ಲಿ ಇಳಿವಯಸ್ಸಿನಲ್ಲಿ ತನ್ನ ಪತ್ನಿಯನ್ನು ಕಳೆದುಕೊಂಡ ನಾಯಕರು, ಕಚ್ಚೆ ಸಡಿಲು ?? ಚ್ಚಂಭಟ್ಟರ ಸಹವಾಸದಿಂದ ?? ಂಭಕ್ಕನನ್ನು ಮದುವೆಯಾಗುತ್ತಾರೆ. ವಾರನ್ನಕ್ಕೆ ಬರುವ ಪುರೋಹಿತರ ಹುಡುಗ ಶ್ಯಾಮ ?? ವರ ಮನೆಯಲ್ಲಿಯೇ ಒಬ್ಬನಾಗುತ್ತಾನೆ. ನಾಯಕರ ಹಿರಿ ಮಗ ರಾಮಣ್ಣ ?? ಮೆರಿಕಾದಲ್ಲಿದ್ದು ?? ಲ್ಲಿಯೆ ಸಂಸಾರಸ್ಥನಾಗುತ್ತಾನೆ. ಕಿರಿಯವನು ಲಕ್ಷ್ಮಣ ವೃತ್ತಿಯಲ್ಲಿ ವಕೀಲ. ಇದು ಇಷ್ಟು ಫ್ಲ್ಯಾಷ್ ಬ್ಯಾಕ್. ಕಥೆ ಆರಂಭವಾಗುವುದು ತನ್ನ ತಂದೆಯ ಸಾವಿನ ತಂತಿಯನ್ನು ಲಕ್ಷ್ಮಣ ಪಡೆದುಕೂಳ್ಳುವಲ್ಲಿಂದ. ನಾಯಕರಂತ ವ್ಯಕ್ತಿಗೆ ಈ ರೀತಿಯ ಸಾವು ?? ಸಹನೀಯವೆಂದು ತಿಳಿದ ಮೇಲೆ ಲಕ್ಷ್ಮಣ ಆ ಸಾವಿನ ಹಿನ್ನಲೆಯನ್ನು ಹಿಡುಕೊಂಡು ಹೋಗುತ್ತಾನೆ. ?? ವರದ್ದು ಆತ್ಮಹತ್ಯೆ ಹೌದು! ಕಾರಣ ಶ್ಯಾಮ ಹಾಗು ?? ವರ ಎರಡನೆ ಹೆಂಡತಿ ?? ಂಭಕ್ಕನಿಗೆ ?? ನೈತಿಕ ಸಂಬಂಧವಿರುವುದು ತಿಳಿಯುತ್ತದೆ. ?? ದಕ್ಕಾಗಿಯೇ ಶ್ಯಾಮನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಕಥೆಯ ತಿರುವು ಪಡೆಯುವುದು ?? ಂಭಕ್ಕ ಬಸುರಿ ?? ನ್ನುವ ವಿಷಯದಲ್ಲಿ. ಲಕ್ಷ್ಮಣ ವೈದ್ಯರನ್ನು ಭೇಟಿಯಾಗಿ ತನ್ನ ತಂದೆ ತನ್ನ ತಾಯಿ ಹೆರಲು ?? ಸಮರ್ಥಳೆಂದು ತಿಳಿದಾಗ ಮಕ್ಕಳಾಗದಂತೆ ?? ಪರೇಷನ್ ಮಾಡಿಕೊಂಡಿರುತ್ತಾರೆ. ಹಾಗೆ ?? ಂಭಕ್ಕನ ಬಸುರಿಗೆ ಕಾರಣ ತಿಳಿಯುತ್ತದೆ. ಹಾಗೆ ಲಕ್ಷ್ಮಣನಿಗೆ ತನ್ನ ತಂದೆಯ ಸಾವಿನ ಹಿನ್ನಲೆಯೂ ತಿಳಿಯುತ್ತದೆ.
ವಿಭಿನ್ನ ಕಥಾವಸ್ತು ಮತ್ತು ನಿರೂಪಣೆಯಿರುವ ಕಥೆ ‘ತಬ್ಬಲಿಗಳು’ ಇಲ್ಲಿಯ ಪಾತ್ರಗಳು ತಂದೆ, ತಾಯಿ. ತಮ್ಮ, ತಂಗಿ ಮತ್ತು ಸೊಸೆ. ಮನೆಯ ಚುಕ್ಕಾಣಿ ಹಿಡಿದ ತಾಯಿ ಬಾಯಿ ಬಡಕಿ. ?? ವಳ ಮಾತಿಗೆ ಯಾರ ದನಿಯೂ ನಿಲ್ಲಲಾರದು. ಸೊಸೆಯನ್ನು ನೆಮ್ಮದಿಯಿಂದ ಇರಗೊಡದವಳು. ಆದರೆ ಸೊಸೆ ಧೈರ್ಯವಂತೆ. ?? ತ್ತೆ ಸಾಯುತ್ತೇನೆಂದಾಗ ಧೈರ್ಯವಾಗಿ ‘ಸಾಯುವವರು ಯಾರೂ ತಾನು ಸಾಯುತ್ತೇನೆ ಎಂದು ಹೇಳುವುದಿಲ್ಲ. ಸಾಯುವುದಕ್ಕೂ ಧೈರ್ಯವಿರಬೇಕು’ ?? ನ್ನುವವಳು. ?? ವಳೇ ಮುಂದೊಂದು ದಿನ ರೈಲಿನ ಗಾಲಿಗಳಿಗೆ ತಲೆಯೊಡ್ಡುತ್ತಾಳೆ. ತಂಗಿಗೆ ಹುಚ್ಚು ಕಾಯಿಲೆ ಹಿಡಿದಾಗ ತನ್ನ ಸೊಸೆಯೇ ಸತ್ತು ಪೀಡಿಸುತ್ತಾಳೆ ಎಂದು ಊರೀಡಿ ಹೇಳಿಕೊಳ್ಳುವ ಹೆಂಗಸು ತಾಯಿ. ತಮ್ಮನ ಹೆಂಡತಿ ಸತ್ತ ಮೇಲೆ ?? ವನು ಮಲ್ಲಿಗೆ ಹೂವುಗಳ ಪರಿಮಳದ ಹಿಂದೆ ಮುಖ ಹೊರಳಿಸಿದವನು. ತಂಗಿಗೆ ಹಿಡಿದ ಕಾಯಿಲೆ ಗುಣವಾಗಲೆಂದು ಮಂತ್ರಾಲಯಕ್ಕೆ ಬರುವ ಕುಟುಂಬದ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಆಲೋಚಿಸುತ್ತಾ ದೂರವಾಗ ಬಯಸುತ್ತಾರೆ. ಇಲ್ಲಿ ಕುಟುಂಬದ ಜವಬ್ದಾರಿಯನ್ನು ಹೊರಲಾರದ ತಂದೆ, ಮಡದಿಯನ್ನು ಕಳೆದುಕೊಂಡ ಹದಿಹರೆಯದ ವಿಧುರ ತಮ್ಮ, ಹುಚ್ಚು ಹಿಡಿದ ತಂಗಿ ವಟವಟಿಸುತ್ತಾ ಸಂಸಾರ ನಡೆಸುವ ತಾಯಿ. ಕೊನೆಗೂ ರಥೋತ್ಸವದ ದಿನ ?? ವರೆಲ್ಲಾ ಬೇರೆಬೇರೆಯಾಗಿ ತಬ್ಬಲಿಗಳಾಗುತ್ತಾರೆ. ಕಥೆಯನ್ನು ನಿರೂಪಿಸಿದ ಶೈಲಿ ನಾನಾ ರೀತಿಯಿಂದ ಚಿಂತನೆಗೆ ಹಚ್ಚುತ್ತದೆ.
‘?? ಲ್ಲಾಉದ್ದೀನನ ?? ದ್ಭುತ ದೀಪ’ ಕಥೆಯಲ್ಲಿ ವಾಸು ತನ್ನ ತಾಯಿಯ ಕೋರಿಕೆಯಂತೆ ಕಕ್ಕ ಸತ್ಯಬೋಧನನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಎದುರಾಗುತ್ತದೆ. ಒಂದು ರಾತ್ರಿಯಲ್ಲಿ ಪಾಪದ ಬೀಜ ಬಿತ್ತಿದ ಕಕ್ಕ ಒಳ್ಳೆಯವನೆ. ?? ಂಬಕ್ಕನೇ ಆತನನ್ನು ?? ಡ್ಡ ದಾರಿಗೆ ಎಳೆದರೂ ತನ್ನ ತಪ್ಪು ಇಲ್ಲದಿದ್ದರೂ ಸತ್ಯವನ್ನು ದನಿ ಏರಿಸಿ ಹೇಳದೆ ಮನೆ ಬಿಟ್ಟು ಹೋಗುತ್ತಾನೆ. ?? ವನು ಮರಳಿ ಬಾರದಿದ್ದರೆ ಆ ಮನೆಯಲ್ಲಿ ತಮಗೆ ?? ಸ್ಥಿತ್ವವೇ ಇಲ್ಲ, ?? ದಕ್ಕಾಗಿ ಆಕಾಶ ಭೂಮಿ ಒಂದಾದರೂ ಸರಿಯೇ ?? ವನನ್ನು ಹುಡುಕಿಕೊಂಡು ಬರುವಂತೆ ಒತ್ತಾಯಿಸುತ್ತಾಳೆ ವಾಸುವಿನ ತಾಯಿ. ಆದರೆ ?? ದು ?? ಲ್ಲಾಉದ್ದೀನನ ?? ದ್ಭುತ ದೀಪವನ್ನು ?? ರಸಿ ಹೊರಟಂತೆ ಆಗುತ್ತದೆ. ಕಥೆ ?? ಪೂರ್ಣವೆನಿಸಿದರೂ ?? ದನ್ನು ನಾನಾ ಕೋನಗಳಿಂದ ಆಲೋಚಿಸಲು ಓದುಗನಿಗೆ ಬಿಟ್ಟಿರುವುದು ಕಥೆಯ ಪ್ಲಸ್ ಪಾಯಿಂಟ್.
ವಾಸ್ತವದ ಎಳೆಯಿಂದನ್ನು ಹಿಡಿದು ಬರೆದ ಕಥೆ ‘ಮೋನಾ ಲೀಸಾ’. ಇಲ್ಲಿ ಪುನರ್ಜನ್ಮದ ?? ನುಭಾವಾತೀತ ಸತ್ಯವನ್ನು ಪ್ರತಿಪಾದಿಸುವ ಹಿನ್ನಲೆಯಿದ್ದರೂ ಕೋರ್ಟು 400 ವರ್ಷಗಳ ಹಿಂದಿನ ಮೋನಾ ಲೀಸಾ ಹಾಗು ತಾನು ಉಪಚರಿಸಿದ ಮೆಟಿಲ್ಡಾಳ ನಡುವಿನ ಸಾಮ್ಯತೆಯನ್ನು ನಿರಾಕರಿಸಿ, ಮೋನಾಲೀಸಾ ಕಲಾಕೃತಿಯನ್ನು ಕದ್ದೊಯ್ದ ಆರೋಪದಲ್ಲಿ ಪೆರ್ರೂಗಿಯನ್ನು ಬಂಧಿಸುತ್ತದೆ. ತನ್ನ ಪ್ರೇಯಸಿಯನ್ನು ಮೋನಾಲೀಸಾಳಿಗೆ ಹೋಲಿಸುತ್ತ ಭಾವನೆಗಳನ್ನು ನವಿರಾಗಿ ಚಿತ್ರಿಸುತ್ತಾ ಪುನರ್ಜನ್ಮವನ್ನು ಕೆದಕುತ್ತ ಸಾಗುತ್ತದೆ ಕಥೆ.
ಸೃಜನಶೀಲತೆಯ, ಚಿಂತನಾ ವೈಖರಿಯಿರುವ ಖಾಸನೀಸರ ಕಥೆಗಳನ್ನು ಒಮ್ಮೆಯಾದರೂ ಓದಲೇಬೇಕು.